ಸುರಪುರ: ಗ್ರಾಮದಲ್ಲಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ,ನಮ್ಮ ಗಮನಕ್ಕೆ ತಂದಲ್ಲಿ ಸಂಬಂಧಿಸಿದ ಇಲಾಖೆಗೆ ಪತ್ರ ವ್ಯವಹಾರ ನಡೆಸಿ ಬಗೆಹರಿಸಲು ಕ್ರಮ ಮುಂದಾಗುವುದಾಗಿ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಿಳಿಸಿದರು.
ತಾಲೂಕಿನ ಖಾನಾಪುರ ಎಸ್.ಹೆಚ್ (ರುಕ್ಮಾಪುರ) ಗ್ರಾಮದಲ್ಲಿ ಸುರಪುರ ಪೊಲೀಸ್ ಉಪ ವಿಭಾಗದಿಂದ ಹಮ್ಮಿಕೊಂಡಿದ್ದ ಎಸ್.ಸಿ,ಎಸ್ಟಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಗ್ರಾಮದಲ್ಲಿನ ಎಲ್ಲರು ಕಾನೂನು ಪಾಲನೆಯೊಂದಿಗೆ ಸೌಹಾರ್ಧಯುತವಾಗಿ ಇರಬೇಕು,ನಿಮ್ಮಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಪೊಲೀಸರ ಗಮನಕ್ಕೆ ತಂದಾಗ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು,ಅಲ್ಲದೆ ಸಂಬಂಧಿಸಿದ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಿ ಸಮಸ್ಯೆಯನ್ನು ಇಲಾಖೆಯ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಅನೇಕ ಜನರು ತಮ್ಮ ಬೇಡಿಕೆಗಳನ್ನು ಸಲ್ಲಿಸಿ ಮಾತನಾಡಿ,ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ತಿಳಿಸಿದರು.ಅಲ್ಲದೆ ದಲಿತ ಕೇರಿಯಲಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಬೇಕು ಮತ್ತು ಮುಖ್ಯವಾಗಿ ಗ್ರಾಮದಲ್ಲಿ ನಿರ್ಮಿಸಲಾದ ಅಂಬೇಡ್ಕರ್ ಭವನ ಕಾಮಗಾರಿ ಅರ್ಧಕ್ಕೆ ನಿಂತಿದ್ದು,ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುರಪುರ ಠಾಣೆಯ ಪೊಲೀಸ್ ಇನ್ಸ್ಪೇಕ್ಟರ್ ಸುನಿಲ್ ಮೂಲಿಮನಿ ಹಾಗು ಗ್ರಾಮದ ಮುಖಂಡ ಹಣುಮಗೌಡ ದಳಪತಿ ಹಾಗು ಅನೇಕ ಜನ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.