ಕಲಬುರಗಿ: ಇಂದು ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ವೈ.ಎಸ್ ರವಿಕುಮಾರ್ ಇವರ ನೇತೃತ್ವದಲ್ಲಿ ಜನ ಸಂಪರ್ಕ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಸಿ ನೆಡುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿದರು.
ನಂತರ ಶರಣಬಸವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ ಅಹವಾಲುಗಳನ್ನು ಸ್ವೀಕರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ DCP ಕಡೂರು ಶ್ರೀನಿವಾಸಲು, ಶ್ರೀಕಾಂತ್ ಕಟ್ಟಿಮನಿ, ಸಹಾಯಕ ಪೊಲೀಸ್ ಆಯುಕ್ತರಾದ ಜೆ,ಎಚ್ ಇನಾಮದಾರ, ಸರ್ಕಲ್ ಇನ್ಸ್‌ಪೆಕ್ಟರ್ ಶಿವಾನಂದ ಘಾಣಿಗೇರ್, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ವಿನೋದ್ ಪಾಟಿಲ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ ಆಡೆ ಮಾಜೀ ಗ್ರಾಮ ಸದಸ್ಯರಾದ ಸಂಗಯ್ಯ ಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರವೀಣ್ ಆಡೆ ಉಪಾಧ್ಯಕ್ಷರಾದ ಇಂದುಬಾಯಿ ರಾಣಪ್ಪ ಮೀಸಿ ಒಳಗೊಂಡಂತೆ ಗ್ರಾಮ ಪಂಚಾಯತನ ಸರ್ವಸದಸ್ಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿನಾಥ ರಾವೂರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿರ್ದೇಶಕರಾದ ಸುರೇಶ್ ತಂಗಾ ಹಾಗೂ SDMC ಅಧ್ಯಕ್ಷರಾದ ಶರಣಗೌಡ ಬಿರಾದಾರ ಮಾಜೀ ಗ್ರಾಮ ಪಂಚಾಯತ ಸದಸ್ಯರಾದ ನಾಗಪ್ಪ ಕಿಳ್ಳಿ, ಶಾಮಲಿಂಗ ಭೋವಿ, ಹೋರಾಟಗಾರರಾದ ಮಲ್ಲಿಕಾರ್ಜುನ ಕಿಳ್ಳಿ, ರಮೇಶ್ ಮೀಸಿ, ಕಲಬುರಗಿ ಗ್ರಾಮೀಣ ಯುವ ಕಾಂಗ್ರೆಸ್ ಸಂಯೋಜಕರಾದ ಶಿವಾನಂದ ಆರ್ ಕಿಳ್ಳಿ, ಹಾಗೂ ಅಮೀರ್ ಪಾಷಾ, ಇಮಾಮ್ ಸಾಬ್ ಲದಾಫ್, ಕುರುಬ ಸಮಾಜದ ಅಧ್ಯಕ್ಷ ಸಿದ್ದಪ್ಪ ಪೂಜಾರಿ ಗ್ರಾಮಸ್ಥರು ಯುವಕರು ಹಾಗೂ ಸರಡಗಿ ಗ್ರಾಮದ ಬೀಟ್ ಪೊಲೀಸರಾದ ಸಂಜೀವಕುಮಾರ್, ಈರಣ್ಣ ಸರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.