ಗಂಗಾವತಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ನಡೆಸಿದ ಮೊಟ್ಟೆ ಹಗರಣ ಭ್ರಷ್ಟಾಚಾರವನ್ನು ವಿರೋಧಿಸಿ ಇಂದು ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿಯಿಂದ ಗಂಗಾವತಿಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸೈಯದ್ ಸರ್ಫರಾಝ್ ಮಾತನಾಡಿ ಗಂಗಾವತಿಗೆ ಕಪ್ಪು ಚುಕ್ಕೆ ತಂದ ಭ್ರಷ್ಟ ಸಚಿವೆಯನ್ನು ಸಭಾಪತಿಗಳು ಅಧಿಕಾರ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದರು ಇಲ್ಲದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ನಾಯಕ ಒಸಾಮಾ ಗಂಗೊಳ್ಳಿ, ಜಿಲ್ಲಾಧ್ಯಕ್ಷರಾದ ಇರ್ಫಾನ್, ಜಿಲ್ಲಾ ಕಾರ್ಯದರ್ಶಿ ಹಮೀದ್, ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.