ಹಡಪದ ಅಪ್ಪಣ್ಣನವರ ವಚನ ಸಾಹಿತ್ಯ ಇಂದಿಗೂ ಪ್ರಸ್ತುತ: ಕನಕಪ್ಪ

0
10
ಶಹಾಬಾದ: ನಗರದ ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯದಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮವನ್ನು ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಉದ್ಘಾಟಿಸಿದರು.

ಶಹಾಬಾದ: ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದ ಹಡಪದ ಅಪ್ಪಣ್ಣನವರ ವಚನ ಸಾಹಿತ್ಯ ಇಂದಿಗೂ ಪ್ರಸ್ತುತವಿದೆ ಎಂದು ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಹೇಳಿದರು.

ಅವರು ನಗರದ ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯದಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಡೋಹರ ಡಕ್ಕಯ್ಯ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಮೋಳಿಗೆಯ ಮಾರಯ್ಯ, ಮೇಧಾರ ಕೇತಯ್ಯ, ಸಮಗಾರ ಹರಳಯ್ಯ, ಸೊನ್ನಲಗದ ಸಿದ್ದರಾಮ ಸೇರಿದಂತೆ ಜಗತ್ತಿನ ಎಲ್ಲ ಧರ್ಮದ ಶರಣರಿಗೆ ಬಸವಣ್ಣನವರು ೧೨ನೇ ಶತಮಾನದ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದ್ದರು. ಸಮಾಜದಲ್ಲಿ ಬೆಳಗ್ಗೆ ಎದ್ದ ತಕ್ಷಣವೇ ಹಡಪದ ಅವರ ಮುಖ ನೋಡಬಾರದು ಎಂಬ ತಪ್ಪು ಕಲ್ಪನೆ ದೂರ ಮಾಡಲು ಅಣ್ಣ ಬಸವಣ್ಣನವರು ಅಪ್ಪಣ್ಣನವರನ್ನು ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿ ಮಾಡಿಕೊಳ್ಳುವ ಮೂಲಕ ತಮ್ಮನ್ನು ನೋಡಲು ಬರುವವರೆಲ್ಲರೂ ಮೊದಲು ಅಪ್ಪಣ್ಣನವರನ್ನು ಭೇಟಿ ಮಾಡಿ ಬರುವಂತೆ ನಿಯಮ ಮಾಡಿದ್ದರು.

ಹಡಪದ ಅಪ್ಪಣ್ಣನವರ ವಚನದಲ್ಲಿ ಲಾಲಿತ್ಯ, ಗುರು, ಲಿಂಗ, ಜಂಗಮ, ನಿ? ಇತ್ತು. ಹೀಗಾಗಿ ಹಡಪದ ಸಮಾಜ ಬಾಂಧವರೆಲ್ಲರೂ ಅಪ್ಪಣ್ಣನವರ ವಚನದ ಪುಸ್ತಕಗಳನ್ನು ಮನೆಯಲ್ಲಿಟ್ಟುಕೊಂಡು ನಿತ್ಯವೂ ಅವರ ವಚನಗಳನ್ನು ಮಕ್ಕಳಿಗೆ ಹಾಗೂ ಕುಟುಂಬದ ಎಲ್ಲರಿಗೂ ಓದಿಸಬೇಕು ಎಂದರು.

ಹಡಪದ ಸಮಾಜದ ಬಸವರಾಜ ಹಳ್ಳಿ ಅಧ್ಯಕ್ಷರು , ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ ಹಡಪದ, ನಗರದ ಸಿದ್ದು ಕೊಲ್ಲಾಪುರ, ಶಿವರಾಜ ಮಾಡಿಗಿ, ಸಿದ್ರಾಮ ಯಾಗಾಪುರ, ವೀರೇಶ ಜೀವಣಗಿ ಸದಸ್ಯರಾದ ಬಸವರಾಜ ಬಿರಾದಾರ, ಸಿಬ್ಬಂದಿಗಳಾದ ಶಂಕ್ರಯ್ಯ ಸ್ವಾಮಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here