ಬೆಂಗಳೂರು ಜುಲೈ 26: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇಂದು ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರ್ನಳ್ಳಿ ಅವರು ಯುನೈಟೆಡ್ ಆಸ್ಪತ್ರೆಯ ವತಿಯಿಂದ ಸದಸ್ಯರುಗಳಿಗೆ ವಿಶೇಷವಾಗಿ ಹೊರತಂದಿರುವ ಯುನೈಟೆಡ್ ಆಸ್ಪತ್ರೆ ಹೆಲ್ತ್ ಕಾರ್ಡನ್ನು ಬಿಡುಗಡೆಗೊಳಿಸಿದರು.
ಎನ್ ಆರ್ ಕಾಲೋನಿಯ ರಾಮ ಮಂದಿರ ಕಲ್ಯಾಣ ಮಂಟದಲ್ಲಿ ಯುನೈಟೆಡ್ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಈ ಹೆಲ್ತ್ ಕಾರ್ಡ್ ಸೌಲಭ್ಯವನ್ನು ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಬಿಡುಗಡೆ ಮಾಡಲಾಯಿತು.
ಸದಸ್ಯರುಗಳಿಗೆ ಈ ಹೆಲ್ತ್ ಕಾರ್ಡನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರ್ನಳ್ಳಿ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಯುನೈಟೆಡ್ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ್ ಸಿದ್ದಾರೆಡ್ಡಿ ಮಾತನಾಡಿ, ಈ ಹೆಲ್ತ್ ಕಾರ್ಡ್ ಮೂಲಕ ಸದಸ್ಯರು ಹಾಗೂ ಅವರ ಕುಟುಂಬದವರು ತಮ್ಮ ಆರೋಗ್ಯದ ಹಲವಾರು ಅವಶ್ಯಕತೆಯನ್ನು ಅತಿಕಡಿಮೆ ವೆಚ್ಚದಲ್ಲಿ ಪೂರೈಸಿಕೊಳ್ಳಬಹುದಾಗಿದೆ. ಇಸಿಜಿ, ಎಕ್ಸ್ – ರೇ, ಸಿಟಿ ಸ್ಕ್ಯಾನ್, ಲ್ಯಾಬೋರೇಟರಿ ಪರೀಕ್ಷೆಗಳು ಮತ್ತು ಸುಪರ್ ಸ್ಪೇಷಾಲಿಟಿ ಕನ್ಸ್‌ಲ್ಟೇಶನ್ ನ್ನು ಇದರಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು.
ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ (ಕರ್ನಾಟಕ ಸರ್ಕಾರ) ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸಚ್ಚಿದಾನಂದಮೂರ್ತಿ, ಯುನೈಟೆಡ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್ ಮುರುಡಾ ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…