ಬಿಸಿ ಬಿಸಿ ಸುದ್ದಿ

ಸಿಎಂ ಸ್ಥಾನಕ್ಕೆ ಯಡಿಂಯೂರಪ್ಪ ರಾಜೀನಾಮೆ:ಬಿಜೆಪಿ ವಿರುದ್ಧ ಯುವ ವೇದಿಕೆ ಆಕ್ರೋಶ

ಸುರಪುರ: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗಿಳಿಸಿದ ಹಿನ್ನೆಲೆಯಲ್ಲಿ ಸುರಪುರದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆಯ ಅನೇಕ ಮುಖಂಡರು ಬಿಜೆಪಿ ವಿರುಧ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೊಣೂರು ಹಾಗು ತಾಲೂಕು ಅಧ್ಯಕ್ಷ ವಿರೇಶ ಪಮಚಾಂಗಮಠ,ಕರ್ನಾಟಕದಲ್ಲಿ ನಲವತ್ತು ವರ್ಷಗಳಿಂದ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಯಡಿಯೂರಪ್ಪನವರು ಪಟ್ಟಶ್ರಮ ಇಡೀ ದೇಶಕ್ಕೆ ಗೊತ್ತಿರುವ ಸಂಗತಿಯಾಗಿದೆ.

ಅಲ್ಲದೆ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬೆಜೆಪಿ ಪಕ್ಷ ಅಧಿಕಾರಕ್ಕೆ ತಂದವರು ಯಡಿಯೂರಪ್ಪನವರು.ಆದರೆ ಇಂತಹ ಒಬ್ಬ ನಾಯಕನಿಗೆ ಬಿಜೆಪಿ ಮುಖ್ಯಮಂತ್ರಿ ಸ್ಥಾನದಿಂದ ಬಲವಂತದಿಂದ ಕೆಳಗಿಳಿಸುವ ಮೂಲಕ ಅವಮಾನಿಸಿದೆ.ಇದು ಕೇವಲ ಯಡಿಯೂರಪ್ಪನವರಿಗೆ ಅವಮಾನಿಸಿಲ್ಲ,ರಾಜ್ಯದಲ್ಲಿರುವ ಸಮಸ್ತ ವೀರಶೈವ ಮತ್ತು ಲಿಂಗಾಯತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪನವರಿಗೆ ಇಡೀ ರಾಜ್ಯದ ವೀರಶೈವ ಮತ್ತು ಲಿಂಗಾಯತ ಸಮುದಾಯ ಬೆಂಬಲಿಸಿತ್ತು,ಆದರೆ ಇಂದು ಯಡಿಯೂರಪ್ಪನವರನ್ನು ಬಲವಂತದಿಂದ ಸಿಎಂ ಸ್ಥಾನದಿಂದ ಕೆಳಗಿಳಿಸಿ ಇಡೀ ಸಮುದಾಯಕ್ಕೆ ನೋವು ಮಾಡಿದ್ದಾರೆ.

ಈ ಸಮುದಾಯ ಬೆಂಬಲಿಸದಿದ್ದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸಿನ ಮಾತಾಗಿತ್ತು,ಆದರೆ ಇಂದು ಇಡೀ ಸಮುದಾಯಕ್ಕೆ ಅವಮಾನಿಸಿದ ಬಿಜೆಪಿ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೆದರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

37 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago