ಬಿಸಿ ಬಿಸಿ ಸುದ್ದಿ

ಶಾಸಕ ಸುಭಾಷ್ ಗುತ್ತೇದಾರರಿಗೆ ಮಂತ್ರಿ ಮಾಡಲು ಮನವಿ

ಆಳಂದ: ಜಿಲ್ಲೆಯಲ್ಲಿ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿರುವ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸಚಿವರನ್ನಾಗಿ ಮಾಡುವುದರ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕೆಂದು ಬಿಜೆಪಿ ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಸುಭಾಷ್ ಆರ್ ಗುತ್ತೇದಾರರು ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು ಕಲ್ಯಾಣ ಕರ್ನಾಟಕ ಪ್ರದೇಶದ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಈ ಅವಧಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಅವಕಾಶ ನೀಡಿಲ್ಲ ಮೇಲಾಗಿ ಸ್ವತಂತ್ರ ಭಾರತದ ಇತಿಹಾಸದಲ್ಲಿ ಆಳಂದ ಮತಕ್ಷೇತ್ರದಿಂದ ಆಯ್ಕೆಯಾದ ಯಾವೊಬ್ಬ ಶಾಸಕರು ಸಚಿವರಾದ ಉದಾಹರಣೆ ಇಲ್ಲ ಅದಕ್ಕಾಗಿ ಬಹಳ ವರ್ಷಗಳಿಂದ ಆಗಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಶಾಸಕರನ್ನು ಮುಂದಿನ ನೂತನ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟು ಸಚಿವರನ್ನಾಗಿ ಮಾಡಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕೆಂದು ವಿನಂತಿಸಿಕೊಂಡಿದ್ದಾರೆ.

ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರರು ಕಳೆದ ೨ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅತೀ ಹೆಚ್ಚಿನ ಮತಗಳು ಬರುವಂತೆ ಮಾಡಿದ್ದಾರೆ ಅಲ್ಲದೇ ಕ್ಷೇತ್ರದ ವ್ಯಾಪ್ತಿಯ ೭ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ೬ರಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ತಾಲೂಕಾ ಪಂಚಾಯತಿ, ಪುರಸಭೆ, ಗ್ರಾಮ ಪಂಚಾಯತಿಗಳಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ ಅವರ ಪಕ್ಷ ಸಂಘಟನೆಯನ್ನು ಗುರುತಿಸಿ ಅವರಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ಆಳಂದ ಮತಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ತನ್ನ ಖಾತೆ ತೆಗೆಯುವಂತೆ ಮಾಡಿದ್ದಾರೆ ಮೇಲಿನ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರರನ್ನು ಸಚಿವರನ್ನಾಗಿ ಮಾಡಬೇಕೆಂದು ವರಿಷ್ಠರಲ್ಲಿ ವಿನಂತಿಸಿಕೊಂಡಿದ್ದಾರೆ.

ಬಾಕ್ಸ್: ಯಡಿಯೂರಪ್ಪನವರು ಮಾಸ್ ಲೀಡರ್ ಎನ್ನುವುದು ಸೂರ್ಯನಷ್ಟೇ ಸತ್ಯ, ಆದರೆ ಪಕ್ಷದ ಆಂತರಿಕ ವಿಚಾರಗಳಿಗೆ ಗೌರವ ಕೊಡಬೇಕಾಗಿರುವುದು ಎಲ್ಲರ ಕರ್ತವ್ಯ ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲಿದೆ- ಆನಂದರಾವ ಪಾಟೀಲ ಕೋರಳ್ಳಿ. ಬಿಜೆಪಿ ಮಂಡಲ ಅಧ್ಯಕ್ಷರು, ಆಳಂದ.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

22 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago