ಕಲಬುರಗಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ದ್ವಿಸದಸ್ಯ ಪೀಠವು ಇದೇ ಜುಲೈ ೫ ರಂದು ಕಲಬುರಗಿಯಲ್ಲಿ ಕಲಬುರಗಿ ವಿಭಾಗ ಮಟ್ಟದ ಜಿಲ್ಲೆಗಳ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತು ಸಾರ್ವಜನಿಕ ಅಹವಾಲುಗಳ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು, ಮಕ್ಕಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ವಿಚಾರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಹವಾಲು ವಿಚಾರಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದೊಡ್ಡ ಪರದೆಯ ಫ್ಲೆಕ್ಸ್ ಅಳವಡಿಸಿ ಪೀಠದ ವಿಚಾರಣೆ ಕುರಿತು ಅರಿವು ನೀಡಬೇಕು. ಇದಲ್ಲದೆ ಶಾಲೆ, ಕಾಲೇಜು, ಅಂಗನವಾಡಿ, ಆರೋಗ್ಯ ಕೇಂದ್ರಗಳು, ಮಕ್ಕಳ ಪುನರ್ವಸತಿ ಕೇಂದ್ರಗಳು, ಬಾಲಕೀಯರ ಮತ್ತು ಬಾಲಕರ ಬಾಲ ಮಂದಿರ, ಸಿ.ಡಿ.ಪಿ.ಓ. ಕಚೇರಿ, ಚೈಲ್ಡ್ ಲೈನ್ ಕೇಂದ್ರ, ಮಕ್ಕಳ ಸಹಾಯವಾಣಿ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಮಕ್ಕಳಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಕಚೇರಿಯ ಸೂಚನಾ ಫಲಕದಲ್ಲಿ ಈ ಬಗ್ಗೆ ಮಾಹಿತಿಯನ್ನು ಪ್ರಚುರಗೊಳಿಸಬೇಕು ಎಂದರು.
ಚೈಲ್ಡ್ ಲೈನ್ ನೋಡಲ್ ಅಧಿಕಾರಿಗಳ ಕಾರ್ಯವೈಖರಿ ಮತು ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದಿದ್ದಾಗ ಜಿಲ್ಲಾಧಿಕಾರಿಗಳು ಸಿಡಿಮಿಡಿಕೊಂಡು, ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬನ್ನಿ ಎಂದು ತಾಕೀತು ಮಾಡಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೀನಾ ಡಿಸೋಜಾ ಮಾತನಾಡಿ ಜಿಲ್ಲೆಯಲ್ಲಿ ಇದುವರೆಗೆ ೨೭೧ ಬಾಲ್ಯ ವಿವಾಹವನ್ನು ತಡೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಶರಣಪ್ಪ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ಕವಿತಾ, ಡಿಹೆಚ್‌ಓ ಡಾ.ಮಾಧವರಾವ ಕೆ.ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಡಿಡಿಪಿಐ ಶಾಂತಗೌಡ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತ, ಚೈಲ್ಡ್‌ಲೈನ್ ನೋಡಲ್ ಅಧಿಕಾರಿ ಬಸವರಾಜ ಸೇರಿದಂತೆ ತಾಲೂಕಿನ ಸಿಡಿಪಿಓ.ಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಮಟ್ಟದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…