ಬಿಸಿ ಬಿಸಿ ಸುದ್ದಿ

400 ಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಶೀಘ್ರವೇ ಖಾಯಂ: ಸಚಿವ ಯು.ಟಿ.ಖಾದರ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಪೈಕಿ ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿರುವ ೪೦೦ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಶೀಘ್ರವೇ ಖಾಯಂಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ ಹೇಳಿದರು.

ಮಂಗಳವಾರ ಕಲಬುರಗಿ ಮಹಾನಗರ ಪಾಲಿಕೆಯ ಟೌನ್ ಹಾಲ್‌ನಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ೧೦೨೪ ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ದಿನದಲ್ಲಿ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಸ್ಥಳೀಯ ಸಂಸ್ಥೆಗಳಿಂದಲೇ ನೇರವಾಗಿ ಪೌರ ಕಾರ್ಮಿಕರ ಸೇವೆಯನ್ನು ಪಡೆದು ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಈಗಿನ ಅಂಕಿ-ಸಂಖ್ಯೆ ಪ್ರಕಾರ ಕಲಬುರಗಿ ನಗರದ ಜನಸಂಖ್ಯೆ ಸುಮಾರು ೬.೨೫ ಲಕ್ಷ ಇದೆ. ಮಳೆ ಕೊರತೆ ಕಾರಣ ಭೀಮಾ ಮತ್ತು ಬೆಣ್ಣೆತೋರಾ ನದಿಯಿಂದ ಕಲಬುರಗಿ ನಗರಕ್ಕೆ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ನಗರದ ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದಲ್ಲಿ ಕೊಳವೆ ಬಾವಿ ಕೊರೆಸಲು ಹೆಚ್ಚಿನ ಒತ್ತು ಕೊಡಿ. ಪಾಲಿಕೆ ವ್ಯಾಪ್ತಿಯಲ್ಲಿ ಅಂತರ್ಜಲಮಟ್ಟವನ್ನು ಹೆಚ್ಚಿಸುವ ಮತ್ತು ಜಲಮೂಲಗಳನ್ನು ಶುದ್ಧಿಗೊಳಿಸುವ ಕಾರ್ಯಕ್ಕೂ ಪಾಲಿಕೆ ಮುಂದಾಗಬೇಕು ಎಂದರು.

ಹಸಿ ಕಸ-ಒಣ ಕಸ ಸಂಗ್ರಹಣೆಯನ್ನು ಮನೆಯಿಂದಲೆ ಪ್ರತ್ಯೇಕವಾಗಿ ಪಡೆಯಲು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ೫-೬ ವಾರ್ಡುಗಳಲ್ಲಿ ಜಾರಿಯಾಗಿದ್ದು, ಮುಂದೆ ಎಲ್ಲಾ ವಾರ್ಡುಗಳಲ್ಲಿ ಇದು ಜಾರಿಗೆ ತರಬೇಕು. ಜನನ-ಮರಣ ಪ್ರಮಾಣ ಪತ್ರವನ್ನು ಒಂದೇ ದಿನದಲ್ಲಿ ನೀಡುವಂತಾಗಬೇಕು ಎಂದ ಸಚಿವರು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿಗೂ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಎಂದರು. ಮಹಾನಗರ ಪಾಲಿಕೆಗೆ ೨೦೧೨-೧೩ನೇ ಸಾಲಿನಿಂದ ೨೦೧೯-೨೦ನೇ ಸಾಲಿನ ವರೆಗೆ ಎಸ್.ಎಫ್.ಸಿ ಅನಟೈಡ್ ಗ್ರ್ಯಾಂಟ್‌ನಡಿ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಕೂಡಲೆ ಅನುದಾನವನ್ನು ಬಳಸಿಕೊಂಡು ಭೌತಿಕ ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ೩೦ ಕೋಟಿ ರೂ. ಅನುದಾನ ನೀಡಲಾಗಿದೆ. ಇದುವರೆಗೆ ೧೨೦ ಕೊಳವೆ ಬಾವಿಗಳು ಕೊರೆಯಲಾಗಿದ್ದು, ೯೦ರಲ್ಲಿ ನೀರು ಲಭ್ಯವಾಗಿದ್ದು ತಕ್ಕಮಟ್ಟಿಗೆ ನೀರಿನ ಸಮಸ್ಯೆ ನೀಗಿಸಿದೆ. ಪಾಲಿಕೆಗೆ ಘನತ್ಯಾಜ್ಯ ವಿಲೇವಾರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಎಲೆಕ್ಟ್ರೀಕಲ್ ಆಟೋಗಳನ್ನು ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ಘನತ್ಯಾಜ್ಯ ವಿಲೇವಾರಿ ಸಾಗಾಟದ ವೆಚ್ಚವನ್ನು ನೇರವಾಗಿ ಆಟೋ ಮಾಲೀಕರಿಗೆ ಪಾವತಿಸುವ ವ್ಯವಸ್ಥೆ ಪಾಲಿಕೆಯಿಂದಾಗಬೇಕು ಎಂದರು.

ಸಭೆಯಲ್ಲಿ ವಿಧಾನಸಭೆಯ ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮೂಡ, ಖನೀಜ್ ಫಾತಿಮಾ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ ಪಾಟೀಲ, ತಿಪ್ಪಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ್ ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago