ಆಳಂದ: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕ ಅನುಷ್ಠಾನ ಹಾಗೂ ಸಾಮಾಜಿಕ ವಿಭಾಗೀಕರಣಗೊಳ್ಳದಂತೆ ಸಲಹೆ ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಹಸೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಸಮಾನ ಕೆಲಕ್ಕೆ ಸಮಾನ ವೇತನ ಪಡೆಯುವ ಹಕ್ಕನ್ನು ಹೊಂದಿರುವ ಕೆಲಸಗಾರರನ್ನು ಜಾತಿ ಆಧಾರದಲ್ಲಿ ವಿಭಜಿಸುವುದು ತಾರ್ಕಿಕವಾಗಿ ಸರಿಯಲ್ಲ. ಸರ್ಕಾರದ ಈ ಸಲಹೆಯಿಂದ ವೇತನ ಸಂದಾಯದ ಮೇಲೆ ಅಹಿತಕರ ಪರಿಣಾಮ ಬೀರುವುದಿಲ್ಲದೆ ವೇತನ ಸಂದಾಯಯ ಹಾಗೂ ಕೆಲಸವನ್ನು ನಿಗಧಿಪಡಿಸುವ ಪ್ರಕ್ರಿಯೆ ಅನಗತ್ಯ ವಿಳಂಬಕ್ಕೆ ಒಳಗಾಗುತ್ತದೆ ಎಂದರು.
ಸರ್ಕಾರದ ಸಲಹೆ ರೂಪದ ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆಯೂ ಎನ್‌ಆರ್‌ಜಿ ಅಡಿಯಲ್ಲಿ ಕೆಲಸದ ದಿನಗಳನ್ನು ವರ್ಷದಲ್ಲಿ ೨೦೦ ದಿನಗಳಿಗೆ ಮತ್ತು ದಿನದ ವೇತ ೬೦೦ ರೂ.ಗಳಿಗೆ ಹೆಚ್ಚಿಸುವಂತೆಯೂ ಹಾಗೂ ನಗರ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ವಿಸ್ತರಿಸುವಂತೆಯೂ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಗ್ರಾಮೀಣ ಹಾಗೂ ನಗರಗಳ ಬಡವರನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿದರು.
ದಲಿತ ಹಕ್ಕುಗಳ ಜಿಲ್ಲಾ ಸಮಿತಿ ಸಂಚಾಲಕ ಸುಧಾಮ ಧನ್ನಿ, ಪ್ರಾಂತ ರೈತ ಸಂಘದ ಕಾರ್ಯದರ್ಶಿ ಪಾಂಡುರಂಗ ಮಾವೀನಕರ್, ರೇಷ್ಮಾ, ದಯಾನಂದ, ಪ್ರಕಾಶ ಜಾನೆ ಮತ್ತಿತರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…