ಕಲಬುರಗಿ: ಇಂದು ಬೆಳಿಗ್ಗೆ ಕಲಬುರಗಿಗೆ ಆಗಮಿಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯ ಆಫಜಲ್ ಪುರ ತಾಲೂಕಿನ ಚವಡಾಪುರ ಗ್ರಾಮದ ಬಳಿ ನರೇಗಾ ಯೋಜನೆಯಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಜಿಲ್ಲಾ,ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.