ಗುಲಬರ್ಗಾ ವಿಶ್ವವಿದ್ಯಾಲಯ: ಎಂ.ಫಿಲ್, ಪಿ.ಎಚ್.ಡಿ ಪ್ರವೇಶಾತಿಗೆ ಅರ್ಜಿ ಅಹ್ವಾನ

0
44

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿವಿಧ ಅಧ್ಯಯನ ಹಾಗೂ ಸಂಶೋಧನಾ ವಿಭಾಗಗಳಲ್ಲಿ ಎಂ.ಫಿಲ್. ಹಾಗೂ ಪಿಹೆಚ್.ಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‍ಸೈಟ್‍ದಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2021ರ ಆಗಸ್ಟ್ 21 ರೊಳಗಾಗಿ ಸಂಬಂಧಪಟ್ಟ ಅಧ್ಯಯನ ವಿಭಾಗದ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ 1,000 ರೂ. ಇದ್ದು, ಪರಿಶಿಷ್ಟ ಜಾತಿ., ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಶುಲ್ಕವನ್ನು ಆನ್‍ಲೈನ್ ಮೂಲಕ ಪಾವತಿಸಬೇಕು. ಎಂ.ಫಿಲ್./ಪಿಹೆಚ್.ಡಿ. ಪ್ರವೇಶ ಪರೀಕ್ಷೆ ದಿನಾಂಕವು ನಂತರ ತಿಳಿಸಲಾಗುವುದು.

Contact Your\'s Advertisement; 9902492681

ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಸಂಬಂಧಪಟ್ಟ ಅಧ್ಯಯನ ವಿಭಾಗದ ಮುಖ್ಯಸ್ಥರನ್ನು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ www.gug.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here