ತೊಗರಿ ಬೆಳೆಯ ವಿಮೆ ಕಂತು ತುಂಬಲು ಜುಲೈ 31 ಕೊನೆಯ ದಿನ

0
59

ಕಲಬುರಗಿ: ಮುಂಗಾರು ಹಂಗಾಮಿಗೆ ಜಿಲ್ಲೆಯ ಪ್ರಮುಖ ಬೆಳೆಯಾದ ತೊಗರಿ ಮಳೆಯಾಶ್ರಿತ ಮತ್ತು ನೀರಾವರಿ ಬೆಳೆಗೆ ಬೆಳೆ ವಿಮೆಗೆ ಜಿಲ್ಲೆಯ ರೈತರು ನೋಂದಣಿ ಮಾಡಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಗೆ 2021 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನೆರಲ್ ಇನ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ. ಪ್ರಸ್ತಕ ಸಾಲು ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆಯಬಹುದಾಗಿದೆ.

Contact Your\'s Advertisement; 9902492681

ರೈತ ಭಾಂದವರು ಉಳಿದ ಬೆಳೆಗಳ ಆಯ್ಕೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೋಂದಣಿಗಾಗಿ ತಮ್ಮ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೋಂದಣಿಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. Localized calamityಯಡಿ ಅತಿ ಮಳೆ, ಪ್ರವಾಹದಿಂಗಾಗಿ ಬೆಳೆ ಹಾನಿಯಾದ ಕುರಿತು ಈಗಾಗಲೇ ವಿಮೆ ಮಾಡಿಸಿದ ರೈತರು 72 ಗಂಟೆಯೊಳಗೆ ಸಹಾಯವಾಣಿ ಸಂಖ್ಯೆ 1800-200-5142 ಕರೆ ಮಾಡಿ ಮಾಹಿತಿ ನೀಡಬೇಕು.

ಜಿಲ್ಲೆಯ ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here