ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದವರನ್ನು ಕೂಡಲೇ ಬಂಧಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.
ಸಂಘಟನೆಯಿಂದ ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ರುಕ್ಮಾಪುರ ಗ್ರಾಮದ ದಲಿತ ಕುಟುಂಬವೊಂದರ ೧೭ ವರ್ಷದ ಅಪ್ರಾಪ್ತ ಬಾಲಕಿ ಬಹಿರ್ದೇಸೆಗೆ ಹೋಗಿ ಬರುವಾಗ ವೆಂಕಟಾಪುರ ಗ್ರಾಮದ ಯುವಕ ತನ್ನ ಬೈಕ್ ಮೇಲೆ ಎತ್ತಿಕೊಂಡು ಹೋಗಿದ್ದಾನೆ.
ತಮ್ಮ ಮಗಳನ್ನು ಕಳುಹಿಸಿಕೊಡುವಂತೆ ಬಾಲಕಿಯ ಪೋಷಕರು ವೆಂಕಟಾಪುರದ ಯುವಕನ ಮನೆಗೆ ಹೋಗಿ ಬೇಡಿಕೊಂಡರೆ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ.ಇದರಿಂದ ಬಾಲಕಿಯ ಕುಟುಂಬ ತೀವ್ರ ನೊಂದಿದೆ,ಅಲ್ಲದೆ ಆ ಕುಟುಂಬ ಈಗ ಮಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದೆ.ಆದ್ದರಿಂದ ಅಪ್ರಾಪ್ತ ಯುವತಿಯನ್ನು ಅಪಹರಿಸಿರುವುದಲ್ಲದೆ,ಯುವತಿಯ ಮನೆಯವರಿಗೆ ನಿಂದಿಸಿರುವ ಯುವಕನ ಪೋಷಕರ ಮೇಲೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಮತ್ತು ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಅಲ್ಲದೆ ಬಾಲಕಿ ಮನೆಯವರು ದೂರು ನೀಡಿದ್ದರು ಇದುವರೆಗೆ ಕ್ರಮ ಕೈಗೊಳ್ಳದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಮಲ್ಲಿಕಾರ್ಜುನ ಕುರಕುಂದಿ,ಮಾನಪ್ಪ ಬಿಜಾಸಪುರ,ಮಹಾದೇವಪ್ಪ ಬಿಜಾಸಪುರ,ಜಟ್ಟೆಪ್ಪ ನಾಗರಾಳ,ಮಲ್ಲಿಕಾರ್ಜುನ ಶಾಖಾನವರ,ರಾಮಣ್ಣ ಶೆಳ್ಳಗಿ,ಮಲ್ಲಿಕಾರ್ಜುನ ವಾಗಣಗೇರಾ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…