ಬಿಸಿ ಬಿಸಿ ಸುದ್ದಿ

ಆ.೧ ರಂದು ಅಣ್ಣಾಭಾವು ಸಾಠೆ ಅವರು ೧೦೧ನೇ ಜಯಂತಿ ಆಚರಣೆ

ಕಲಬುರಗಿ: ಅಗಸ್ಟ್ ೧ ರಂದು ಸಾಹಿತ್ಯ ಸಾಮ್ರಾಟ್ ಲೋಕಶಾಹಿರ ಅಣ್ಣಾಭಾವು ಸಾಠೆ ಅವರ ೧೦೧ನೇ ಜಯಂತಿಯನ್ನು ಸರಳವಾಗಿ ಕೋವಿಡ್-೧೯ ರ ನಿಯಮಗಳನ್ನು ಪಾಲಿಸುವುದರೊಂದಿಗೆ ಅಂದು ಬೆಳಿಗ್ಗೆ ೧೦-೩೦ಕ್ಕೆ ನಗರದ ಕನ್ನಡ ಭವನದಲ್ಲಿ ಅಣ್ಣಾಬಾವು ಸಾಠೆ ಮಾದಿಗ ಮಹಾಸಭಾದ ವತಿಯಿಂದ ಮಾದಿಗ ಹಿರಿಯ ಮುಖಂಡರಾದ ದಶರಥ ಕಲಗುರ್ತಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾದಿಗ ಸಮಾಹ ಸಮನ್ವಯ ಸಮಿತಿಯ ಅಧ್ಯಕ್ಷ ಪರಮೇಶ್ವರ ಖಾನಾಪೂರ ಅವರು ವಹಿಸಲಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಭೀಮಣ್ಣ ಬಿಲ್ಲವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಫಾಯಿ ಕರ್ಮಚಾರಿ ರಾಜ್ಯ ಸದಸ್ಯರಾದ ಗೀತಾ ವಾಡೇಕರ್ ಅವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾದಿಗ ಸಮಾಜದ ಹಿರಿಯ ಮುಖಂಡರಾದ ಶಾಮ ನಾಟೀಕರ್, ಡಿಎಂಎಸ್‌ಎಸ್‌ನ ರಾಜ್ಯಾಧ್ಯಕ್ಷ ಲಿಂಗರಾಜ ತಾರಪೈಲ್, ರಾಜು ವಾಡೇಕರ್, ಗೋಪಿಕೃಷ್ಣ ಗುಡೇನವರ್, ಮಾದಿಗ ದಂಡೋರ ರಾಜ್ಯ ಯುವ ಘಟಕದ ಅಧ್ಯಕ್ಷ ಗುರು ಭಂಡಾರಿ, ಮಹೇಶ ವಾಡೇಕರ್, ಬಾಬು ಸುಂಠಾಣ, ರಾಜು ಕಟ್ಟಿಮನಿ, ರಮೇಶ ವಾಡೇಕರ್, ಸಮಾಜದ ಮುಖಂಡರಾದ ದಶರಥ ದುಮ್ಮನಸೂರ, ಪ್ರದೀಪ ಭಾವೆ ಮತ್ತು ಸಮಾಜದ ಹಿರಿಯ ಮುಖಂಡರು, ಯುವನಾಯಕರು, ಸಮಾಜದ ಹಿತಚಿಂತಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿಯ ರಾಜ್ಯಾಧ್ಯಕ್ಷ ನಾಗರಾಜು ಗುಂಡಗುರ್ತಿ ಅವರು ಪತ್ರಿಕಾ ಪ್ರಕಟಣೆಯನ್ನು ಮನವಿ ಮಾಡಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

10 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

21 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

21 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

23 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

23 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

23 hours ago