ಕಲಬುರಗಿ: ನಗರ – ಬಬಲಾದ ರೈಲ್ವೆ ನಿಲ್ದಾಣಗಳ ಮಧ್ಯೆ ಜೇವರ್ಗಿ ಮೇಲ್ಸೇತುವೆಯ ಕೆಳಭಾಗದಲ್ಲಿ ರೈಲ್ವೆ ಹಳಿಯಲ್ಲಿ ಜುಲೈ 27 ರಂದು ಸುಮಾರು 48 ವರ್ಷದ ಅಪರಿಚಿತ (ಪುರುಷ) ವ್ಯಕ್ತಿಯ ಮೃತ ದೇಹವು ಪತ್ತೆಯಾಗಿದ್ದು, ಈವರೆಗೆ ಮೃತನ ವಾರಸುದಾರರು ಯಾರೂ ಪತ್ತೆಯಾಗಿರುವುದಿಲ್ಲ ಎಂದು ವಾಡಿ ರೈಲ್ವೆ ಪೆÇಲೀಸ್ ಠಾಣೆಯ ಪೋಲಿಸ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಯುಡಿಆರ್ ನಂ. 43/2021 ಕಲಂ 174 ಸಿ.ಆರ್.ಪಿ.ಸಿ. ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು, ಮೃತರು ದುಂಡನೆಯ ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಉದ್ದವಾದ ಮೂಗು, ಸಣ್ಣದಾದ ಗಡ್ಡ-ಮೀಸೆ ಇರುತ್ತದೆ. 5 ಅಡಿ 2 ಇಂಚು ಎತ್ತರ ಇದ್ದು, ತಲೆಯಲ್ಲಿ ಒಂದೂವರೆ ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಕೂದಲು ಹೊಂದಿರುತ್ತಾನೆ.
ಮೃತ ವ್ಯಕ್ತಿಯು ಕಪ್ಪು ಬಣ್ಣದ ಪ್ಯಾಂಟ್, ಬಿಳಿಯ ಶ್ಯಾಂಡೊ ಬನಿಯನ್, ಕಪ್ಪು ಬಣ್ಣದ ಬೆಲ್ಟ್, ನಾಶಿ ಬಣ್ಣದ ಅಂಡರವೇರ್, ಕಪ್ಪು ಗೆರೆಗಳ ಬಿಳಿ ಬಣ್ಣದ ಫುಲ್‍ಶರ್ಟ್, ಕಾಲರ್ ಮೇಲೆ (Action Tailor & S.B college road KLB) ಲೇಬಲ್ ಇರುತ್ತದೆ.
ಈ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ವಾಡಿ ರೈಲು ನಿಲ್ದಾಣ ಪೋಲಿಸ್ ಠಾಣೆಯ ಇ-ಮೇಲ್ wadirly@ksp.gov.in ಗೆ ಅಥವಾ ಪೋಲಿಸ್ ಸಬ್‍ಇನ್ಸ್‍ಪೆಕ್ಟರ್ ಇವರನ್ನು ಅಥವಾ ಠಾಣೆಯ ದೂರವಾಣಿ ಸಂಖ್ಯೆ 08476-202244 ಹಾಗೂ ಮೊಬೈಲ್ ಸಂಖ್ಯೆ: 9480802132 ಗೆ ಸಂಪರ್ಕಿಸಲು ಕೋರಿದೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…