ಕಲಬುರಗಿ: ಈ ಭಾಗದ ಮುತ್ಸದ್ಧಿ ರಾಜಕಾರಣಿ ಶಶೀಲ್ ಜಿ. ನಮೋಶಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ರಮೇಶ ಕಡಾಳೆ ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿರುವ ನಮೋಶಿ ಅವರು ಈ ಭಾಗದಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಸಾಕಷ್ಟು ದುಡಿದಿದ್ದಾರೆ.
ನಮೋಶಿ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಒಬ್ಬ ಅನುಭವಿ ಮತ್ತು ಸಮರ್ಥ ನಾಯಕನಿಗೆ ಸ್ಥಾನ ನೀಡಿದಂತಾಗುತ್ತದೆ. ಮೇಲಾಗಿ ಈ ಭಾಗದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.