ಜ್ಞಾನದ ಜತೆಗೆ ಸಂಸ್ಕಾರ ಮುಖ್ಯ: ಬಸವರಾಜ ದೇಶಮುಖ

0
8

ಕಲಬುರಗಿ : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಜ್ಞಾನದ ಜತೆಗೆ ಸಂಸ್ಕಾರ ಬೆಳೆಸುವುದು ಅವಶ್ಯಕವಾಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾ‍ರ್ಯದರ್ಶಿ ಬಸವರಾಜ ದೇಶಮುಖ ಅವರು ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ  ಶರಣಬಸವೇಶ್ವರ ದೇವಸ್ಥಾನದ  ಆವರಣದ ಶಾಲಾ ಕಾಲೇಜುಗಳು ಗುರುವಾರ ಹಮ್ಮಿಕೊಂಡ ತಮ್ಮ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ಮೊದಲು ಹೆಣ್ಣುಮಕ್ಕಳ ಶಾಲೆ ಆರಂಭಮಾಡಿದ ಪೂಜ್ಯ ದೊಡ್ಡಪ್ಪ ಅಪ್ಪ ಅವರ ನಂತರ  ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿಯವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣವನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಇಲ್ಲಿ ಕಲಿತ  ಅನೇಕ ವಿದ್ಯಾರ್ಥಿಗಳ ಬಾಳಿಗೆ ದಿವಿಗೆಯಾಗಿದ್ದಾರೆ. ಶರಣಬಸೇಶ್ವರ ಸಂಸ್ಥಾನ ಅನ್ನದಾಸೋಹದ ಜೊತೆಗೆ ಶಿಕ್ಷಣ ದಾಸೋಹ ಮಾಡಿ ಈ ಭಾಗ ಶೈಕ್ಷಣಿಕ ಕೇಂದ್ರವಾಗಿ ಬೆಳೆದಿದೆ ಎಂದರು.

ಕಾರ್ಯಕ್ರಮದಲ್ಲಿ ಹೆಚ್.ಕೆ.ಇ. ಸಂಸ್ಥೆಯ ಕಾರ್ಯದರ್ಶಿ , ಖ್ಯಾತ ವೈದ್ಯ ಡಾ.ಜಗನ್ನಾಥ ಬಿಜಾಪೂರೆ ಅವರು ಮಾತನಾಡಿ, ಶರಣಬಸವೇಶ್ವರ ಸಂಸ್ಥಾನ ಅನೇಕ ಬಾಳನ್ನು ಬೆಳಗಲು ಕಾರಣವಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿವರ್ಷ ಇಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವೀರಶೈವ ಮುಖಂಡರಾದ ಅರುಣಕುಮಾರ ಪಾಟೀಲ ಕೂಡಲಹಂಗರಗಾ, ಮುಕ್ತಾಂಬಿಕಾ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಮ್.ಆರ್.ಹುಗ್ಗಿ, ದೊಡ್ಡಪ್ಪ ಅಪ್ಪ ಪದವಿಪೂರ್ವ ಮಹಾವಿದ್ಯಾಲಯದ ನಿರ್ದೇಶಕ ಡಾ.ರಾಮಕ್ರಷ್ಣ ರೆಡ್ಡಿ, ಶರಣಬಸವೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಯ ಮಡಿವಾಳಪ್ಪ ಮಾತನಾಡಿದರು. ವೇದಿಕೆ ಮೇಲೆ ಹಿರಿಯರಾದ ಕಲ್ಯಾಣಪ್ಪ ಪಾಟೀಲ, ಶ್ರೀಶೈಲ್ ಘೂಳಿ ಇದ್ದರು.

ಗೋದುತಾಯಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಸ್ವಾಗತಿಸಿದರು, ದೊಡ್ಡಪ್ಪ ಅಪ್ಪ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ವಿನೋದ ಪತಂಗೆ ಪ್ರಾಸ್ತಾವಿಕ ಮಾತನಾಡಿದರು. ಶರಣಬಸವೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ಪ್ರೊ.ಬಿ.ಸಿ.ಚವ್ಹಾಣ ವಂದಿಸಿದರು. ಡಾ.ಪುಟ್ಟಮಣಿ ದೇವಿದಾಸ ನಿರೂಪಿಸಿದರು, ಡಾ.ಸೀಮಾ ಪಾಟೀಲ ಪ್ರಾರ್ಥಿಸಿದರು.

ಗೋದುತಾಯಿ ಬಿ.ಎಡ್. ಮಹಾವಿದ್ಯಾಲಯ ಪ್ರಾಚಾರ್ಯೆ ಕಲ್ಪನಾ ಭೀಮಳ್ಳಿ, ಗೋದುತಾಯಿ  ದೊಡ್ಡಪ್ಪ ಅಪ್ಪ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಅನ್ನಪೂರ್ಣರೆಡ್ಡಿ, ಮಹಾದೇವಿ  ಪ್ರೌಢಶಾಲೆಯ ಮುಖ್ಯೋಪಾಧ್ಯಯಿ ಅನಿತಾ , ಮಹಾದೇವಿ ಕನ್ಯಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿ ಭಾಗ್ಯಶ್ರೀ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಸುರೇಶಕುಮಾರ ನಂದಗಾಂವ, ಶಿಕ್ಷಕರು, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here