ಶಿಕ್ಷಕರ ವಿವಿಧ ಬೇಡಿಕೆಗಳ ಆಗ್ರಹಸಿ ಜು. 9ಕ್ಕೆ ರಾಜ್ಯಾದ್ಯಂತ ಸರಕಾರಿ ಶಾಲೆ ಬಂದ್ ?

0
61

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು ಹಾಗೂ 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಬೋಧನೆಗೆ ಸೀಮಿತಗೊಳಿಸಿರುವ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಜು.9ರಂದು ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡಲು ಶಿಕ್ಷಕರ ಸಂಘ ನಿರ್ಧರಿಸಿದೆ ಎಂದು ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣ ಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಎನ್.ಎಸ್. ತಿಳಿಸಿದ್ದಾರೆ.

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಜೂ.30ರ ವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಸರ್ಕಾರವು ಯಾವುದೇ ರೀತಿಯಲ್ಲಿ ಸ್ಪಂದಿಸದಿರುವುದರಿಂದ ಸಂಘ ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷಕರನ್ನು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿಯೂ ಕಾರ್ಯ ನಿರ್ವಹಿಸಲು ಪದವೀಧರ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಜು.9ರಂದು ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here