ಕಲಬುರಗಿ: ಕಠಿಣ ಪರಿಶ್ರಮದಿಂದ ಮನುಷ್ಯನು ಸಾಧನೆಯ ಶಿಖರವೇರಬಹುದು ಎಂದು ಉತ್ತರ ಕರ್ನಾಟಕ ಧಾರವಾಡ ವಿಭಾಗದ ಜನರಲ್ ಪೋಸ್ಟ್ ಮಾಸ್ಟರಾದ ಡಾ. ಎನ್. ವಿನೋದ ಕುಮಾರ ಹೇಳಿದರು.
ನಗರದ ಮುಖ್ಯ ಅಂಚೆ ಕಚೇರಿ ಯಲ್ಲಿ 2020-21 ಆರ್ಥಿಕ ಸಾಲಿನ ತ್ರೈಮಾಸಿಕ ಅವಧಿಯಲ್ಲಿ ಗರಿಷ್ಠ ಹಣ ಹೂಡಿಕೆ ಮಾಡಿಸುವಲ್ಲಿ ಅವಿರತ ಪರಿಶ್ರಮ ಪಟ್ಟ ಸಣ್ಣ ಉಳಿತಾಯ ಪ್ರತಿನಿಧಿಗಳಗಳಿಗೆ ಪ್ರಶಸ್ತಿ ನೀಡಿ ಮಾತನಾಡುತ್ತಾ ವಿಶ್ವಾಸಕ್ಕೆ ಇನ್ನೊಂದು ಹೆಸರೇ ಅಂಚೆ ಕಚೇರಿ ಮಕ್ಕಳ ಭವಿಷ್ಯಕ್ಕಾಗಿ ಅಂಚೆ ಕಚೇರಿಯಲ್ಲಿ ಸಾರ್ವಜನಿಕರು ಹೆಚ್ಚು ಹಣ ಹೂಡಿ ಲಾಭ ಪಡೆದುಕೊಳ್ಳಬೇಕೆಂದು ಹೇಳಿದರು.
ವೇದಿಕೆಯ ಮೇಲೆ ಕಲಬುರಗಿ ವಿಭಾಗದ ವರಿಷ್ಠ ಅಂಚೆ ಕಚೇರಿಯ ಅಧೀಕ್ಷಕರಾದ ಶ್ರೀ ಬಿ. ಆರ್. ನನಜಗಿ,ಅಂಚೆ ಅಧಿಕಾರಿಯಾದ ಶ್ರೀ ಅಶೋಕ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸಣ್ಣ ಉಳಿತಾಯದಲ್ಲಿ ಅತಿ ಹೆಚ್ಚು ಹಣ ಹೂಡಿಕೆ ಮಾಡಿದ ಹಿರಿಯ ಪ್ರತಿನಿಧಿಯಾದ ಸಂಗಮೇಶ ಸರಡಗಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಚೆ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು, ಪ್ರತಿನಿಧಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…