ಮತ್ತಿಮೂಡ ಅವರಿಗೆ ಸಚಿವ ಸ್ಥಾನ ನೀಡಿ: ಸರಡಗಿ ಆಗ್ರಹ

0
44

ಕಲಬುರಗಿ: ಹೊಸ ಸಚಿವ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನವಾಗಿ ರಚನೆಯಾಗಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಸರಡಗಿ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಮತ್ತಿಮೂಡ ಅವರು ಹೈದ್ರಾಬಾದ್ ಕರ್ನಾಟಕ ಭಾಗದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾಗಿದ್ದಾರೆ. ಸುಮಾರು ವರ್ಷಗಳಿಂದ ರಾಜಕಾರಣದಲ್ಲಿದ್ದು, ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯುತ್ತದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಇದುವರೆಗೆ ಶಾಸಕರಿಗೆ ಯಾವುದೇ ಸಚಿವ ಸ್ಥಾನ ನೀಡದ ಕಾರಣಕ್ಕೆ ಗ್ರಾಮೀಣ ಕ್ಷೇತ್ರದ ಜನತೆಗೆ ತುಂಬಾ ಅನ್ಯಾಯವಾಗಿದೆ. ಒಂದು ವೇಳೆ ಇವರಿಗೆ ಸಚಿವ ಸ್ಥಾನ ಸಿಗದಿದ್ದರೆ ರಾಜ್ಯಾದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಸರಡಗಿ ಎಚ್ಚರಿಕೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here