ಬಿಸಿ ಬಿಸಿ ಸುದ್ದಿ

ತಾಲೂಕಿನ ಗ್ರಾಮೀಣ ಭಾಗದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಿ

ಸುರಪುರ:ಕೋವಿಡ್‌ನಿಂದಾಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿನ ಎಲ್ಲಾ ಸಮುದಾಯಗಳ ಬಡ ಕುಟುಂಬದಲ್ಲಿನ ವಿದ್ಯಾರ್ಥಿಗಳು ಆರ್ಥಿಕ ತೊಂದರೆಗೊಳಗಾಗಿದ್ದು,ಗ್ರಾಮ ಪಂಚಾಯತಿಯಿಂದ ಸಹಾಧನ ನೀಡಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ತಾಲೂಕು ಪಂಚಾಯತಿ ಇಒ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಪರಿಷತ್‌ನ ಕಲಬುರಗಿ ವಿಭಾಗ ಸಹ ಪ್ರಮುಖರಾದ ಡಾ: ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯಿಂದಾಗಿ ಎಲ್ಲರ ಬದುಕನ್ನು ತಲ್ಲಣಗೊಳಿಸಿದೆ.ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಬಡ ಹಾಗು ಮದ್ಯಮ ವರ್ಗಗಳ ಕಟುಂಬ ನಿರ್ವಹಣೆ ತುಂಬಾ ತೊಂದರೆ ಅನುಭವಿಸುತ್ತಿದೆ.

ಇಂತಹ ಸಂದರ್ಭದಲ್ಲಿ ಈಗ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಕಾಲೇಜು ಪ್ರವೇಶ ಶುಲ್ಕ ತುಂಬಲು ತೀವ್ರ ಸಮಸ್ಯೆ ಹೆದರಿಸುವಂತಾಗಿದೆ.ಆದ್ದರಿಂದ ಮಾನ್ಯರಾದ ತಾವುಗಳು ಗ್ರಾಮೀಣ ಪ್ರದೇಶದಲ್ಲಿನ ಎಲ್ಲಾ ಸಮುದಾಯದ ಬಡ ಕುಟುಂಬದ ವಿದ್ಯಾರ್ಥಿಗಳು ಕಾಲೇಜು ಪ್ರವೇಶಕ್ಕೆ ಶುಲ್ಕಕ್ಕಾಗಿ ಸಹಾಯಧನವನ್ನು ನೀಡುವುದು ಅಗತ್ಯವಾಗಿದೆ.ಆದ್ದರಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡುವಂತೆ ಪಿಡಿಒಗಳಿಗೆ ಸೂಚನೆಯನ್ನು ನೀಡಿದಲ್ಲಿ ತುಂಬಾ ಅನುಕೂಲವಾಗಲಿದೆ.

ಕೇವಲ ಎಸ್.ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡುತ್ತಿರುವುದಾಗಿ ಮಾಹಿತಿ ಇದೆ,ಆದರೆ ಈಗಿನ ಪರಸ್ಥಿತಿಯಲ್ಲಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ತೀವ್ರ ತೊಂದರೆಯಲ್ಲಿರುವುದರಿಂದ ಯಾವುದೇ ಸಮುದಾದ ತಾರತಮ್ಯವಿಲ್ಲದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಧನ ಸಹಾಯ ದೊರೆಯಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ವಿನಂತಿಸುತ್ತದೆ.ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪರಿಷತ್‌ನ ನಗರ ಕಾರ್ಯದರ್ಶಿ ಹನುಮಂತ ಸಿಂಘೆ,ಕಾರ್ಯದರ್ಶಿ ಹುಲಗಪ್ಪ, ಕ್ಯಾತಪ್ಪ ಮೇದಾ ಸೇರಿದಂತೆ ಇತರರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

3 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

14 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

14 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

17 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

17 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

17 hours ago