ಬಿಸಿ ಬಿಸಿ ಸುದ್ದಿ

ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಮಸ್ತಾನ ಸಾಬ ರಟಕಲ್ ಮನವಿ

ಕಲಬುರಗಿ: ಚಿಂಚೋಳಿ ಕ್ಷೇತ್ರದ ಮಾಜಿ ಶಾಸಕ ಮತ್ತು ಉಪಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲ್ಲುವಿಗೆ ಕಾರಣಕರ್ತರಾದ ವಿಧಾನಪರಿಷತ್‌ ಸದಸ್ಯ ಸುನೀಲ್‌ ವಲ್ಯಾಪುರೆ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅಲ್ಪಸಂಖ್ಯಾತರ ಚಿಂಚೋಳಿ ತಾಲ್ಲೂಕು ಮಾಜಿ ಅಧ್ಯಕ್ಷರಾದ ಮೆಡಿಕಲ್ ಮಸ್ತಾನ್ ಸಾಬ್ ರಟಕಲ್ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ವಿಧಾನ ಪರಿಷತ್ ಸದಸ್ಯ ಸುನೀಲ ವಲ್ಯಾಪುರೆ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.

ಚಿಂಚೋಳಿ ಉಪ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ  ಬಿ.ಎಸ್.ಯಡಿಯೂರಪ್ಪನವರು ಸಾರ್ವಜನಿಕ ಸಮಾರಂಭದಲ್ಲಿ ಸುನೀಲ ವಲ್ಯಾಪುರವರನ್ನು ಎಂ.ಎಲ್.ಸಿ. ಮಾಡಿ ಮಂತ್ರಿ ಸ್ಥಾನ ನೀಡಿ ನನ್ನ ಪಕ್ಷದಲ್ಲಯೇ ಇಟ್ಟುಕೊಳ್ಳುತ್ತೇನೆ ಎಂದು ಸಭೆಯಲ್ಲಿ ಘೋಷಿಸಿದ್ದರು. ಅವರ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರು ಉಳಿಸಿಕುಡಬೇಕೆಂದು ಸ್ಮರಿಸುವ ಮೂಲಕ ಮನವಿ ಮಾಡಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

2 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

3 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

3 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

14 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

14 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

14 hours ago