ಬಿಸಿ ಬಿಸಿ ಸುದ್ದಿ

ಸುನೀಲ್‌ವಲ್ಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಭೋವಿ ಸಮುದಾಯ ಮನವಿ

ಕಲಬುರಗಿ: ಭೋವಿ (ವಡ್ಡರ) ಸಮುದಾಯಕ್ಕೆ ಸೇರಿದ ಹಾಗೂ ಕಲ್ಯಾಣ ಕರ್ನಾಟಕ ಭಾಗದ ವಿಧಾನ ಪರಿಷತ್ ಸದಸ್ಯರಾದ ಸುನೀಲ ವಲ್ಲ್ಯಾಪುರ ಅವರಿಗೆ ಸಚಿವ ಸ್ಥಾನವನ್ನು ನೀಡುಬೇಕೆಂದು ಆಗ್ರಹಿಸಿ ಭಾರತೀಯ ಯುವ ಸೈನ್ಯವು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್‌ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಲಾಯಿತು ಎಂದು ಸೈನ್ಯದ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಶ್ರೀನಿವಾಸ ಡೋಣ್ಣೆಗೇರಿ ಅವರು  ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಸುಮಾರು ೬೦ ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭೋವಿ ಸಮುದಾಯವು ಬಿಜೆಪಿ ಪಕ್ಷಕ್ಕೆ ಬರಲು ಹಿಂದಿನಿಂದಲು ಈ ಸಮುದಾಯವು ಮಂಚೂಣಿಯಲ್ಲಿದೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭೋವಿ ಸಮುದಾಯದ ಸಂಘಟಿತ ಬೆಂಬಲದಿಂದ ಬಿಜೆಪಿ ಪಕ್ಷಕ್ಕೆ ನಿರಂತರವಾಗಿ ಬೆಂಬಲ ಸೂಚಿಸಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ನಮ್ಮ ಸಮುದಾಯದ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸುನೀಲ ವಲ್ಲ್ಯಾಪುರೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಎರಡು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡುವುದರ ಜೊತೆಗೆ ಅನುಭವವುಳ್ಳವರಗಿದ್ದಾರೆ.  ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದು ಯಡಿಯೂರಪ್ಪನವರು ಈ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮೀಸಲು ಕ್ಷೇತ್ರವಾದ ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಸುನೀಲ ವಲ್ಲ್ಯಾಪುರ ಅವರು ಉಪ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ನಿಂದ ಬಂದ ಡಾ. ಉಮೇಶ ಜಾಧವ ಅವರ ಪುತ್ರ ಡಾ. ಅವಿನಾಶ ಜಾಧವರವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟ ಇವರ ತ್ಯಾಗ ಮನೋಭಾವ ದೊಡ್ಡದು ಎಂದರು.

ಅಲ್ಲದೇ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸುವ ಮುಖಾಂತರ ಯಡಿಯೂರಪ್ಪನವರ ಕೈ ಬಲಪಡಿಸಿದರು. ಇದನ್ನು ರಾಜ್ಯದ ಜನ ಮರೆಯುವಂತಿಲ್ಲ. ಚಿಂಚೋಳಿಯಲ್ಲಿ ಉಪ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಯಡಿಯೂರಪ್ಪನವರು ಸಾರ್ವಜನಿಕ ಸಮಾರಂಭದಲ್ಲಿ ಸುನೀಲ್ ವಲ್ಲ್ಯಾಪುರೆ ಅವರನ್ನು ಎಂಎಲ್‌ಸಿ ಮಾಡಿ ಮಂತ್ರಿಯನ್ನಾಗಿ ಮಾಡಿ ನನ್ನ ಪಕ್ಷದಲ್ಲಿಯೇ ಇಟ್ಟುಕೊಳ್ಳುತ್ತೇನೆ ಎಂದು ಸಭೆಯಲ್ಲಿ ನುಡಿದಿದ್ದರು. ಅದಕ್ಕಾಗಿ ನುಡಿದಂತೆ ನಡೆಯುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಮೇಲೆ ನಮ್ಮ ಸಮುದಾಯ ಅಪಾರವಾದ ಗೌರವ ಮತ್ತು ವಿಶ್ವಾಸವನ್ನು ಇಟ್ಟುಕೊಂಡಿದೆ ಎಂದರು.

ಆದ್ದರಿಂದ ಪಕ್ಷದ ನಿಷ್ಠಾವಂತ ಸೇವೆ ಅಪಾರ ಜನಪರ ಕಾಳಜಿ ಇರುವ ತ್ಯಾಗ ಮನೋಭಾವ ಇರುವ ಇಂತಹ ಸರಳ ಜೀವಿಯಾದ ಸುನೀಲ್ ವಲ್ಲ್ಯಾಪುರೆ ಅವರನ್ನು ದಲಿತ ಕೋಟಾದಡಿಯಲ್ಲಿ ಭೋವಿ ಸಮುದಾಯಕ್ಕೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಏಕೈಕ ಭೋವಿ ಸಮುದಾಯದ ಶಾಸಕರಾಗಿರುತ್ತಾರೆ. ಹೀಗಾಗಿ ಸುನೀಲ್ ವಲ್ಲ್ಯಾಪುರೆ ಅವರನ್ನು ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿ ಹಿಂದುಳಿದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ಅವಕಾಶವನ್ನು ಕಲ್ಪಿಸಬೇಕು.

ಸಮಾಜಿಕ ನ್ಯಾಯದಡಿಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳು ಮತ್ತು ಪಕ್ಷದ ಎಲ್ಲಾ ವರಿಷ್ಠರು ಕೂಡಲೇ ಸುನೀಲ್ ವಲ್ಲ್ಯಾಪುರ ಅವರನ್ನು ಸಚಿವರನ್ನಾಗಿ ಮಾಡಿ ನಮ್ಮ ಭೋವಿ ಸಮುದಾಯ್ಕಕೆ ನ್ಯಾಯ ಕಲ್ಪಿಸಬೇಕು. ಒಂದು ವೇಳೆ ವಲ್ಲ್ಯಾಪುರ ಅವರನ್ನು ಮಂತ್ರಿ ಸ್ಥಾನ ನೀಡದೆ ಇದ್ದಲ್ಲಿ ನಮ್ಮ ಸಮುದಾಯವು ರಾಜ್ಯಾದ್ಯಾಂತ ನ್ಯಾಯಯುತವಾಗಿ ಪ್ರತಿಭಟನೆಯನ್ನು ಮಾಡಲಾಗುವುದು ಎಂದು ಸೈನ್ಯವು ಆಗ್ರಹಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸೈನ್ಯದ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ ಎಸ್. ಗುಂಡೂಲ್ಕರ್, ಜಿಲ್ಲಾ ಕಾರ್ಯಧ್ಯಕ್ಷ ಲಕ್ಷ್ಮಣ ಭೋವಿ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago