ಕಲಬುರಗಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ದಿಂದ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯುಳ್ಳ ಕಲಬುರಗಿ ಜಿಲ್ಲೆಯ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಅಗಸ್ಟ್ ಮಾಹೆಯ ಎರಡನೇ ವಾರದಲ್ಲಿ 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಕಲಬುರಗಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಕನಿಷ್ಠ 10ನೇ ತರಗತಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಹಾಗೂ ಬಿಳಿ ಹಾಳೆಯಲ್ಲಿ ಸ್ವ ವಿವರದೊಂದಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ವಿದ್ಯಾಭ್ಯಾಸದ ಅಂಕಪಟ್ಟಿ ಪ್ರತಿ ಹಾಗೂ ಇತರೆ ಸಂಬಂಧಪಟ್ಟ ದಾಖಲಾತಿಗಳನ್ನು ಲಗತ್ತಿಸಿ ಜಂಟಿ ನಿರ್ದೇಶಕರು, ಸಿಡಾಕ್. ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102 ವಿಳಾಸಕ್ಕೆ 2021ರ ಅಗಸ್ಟ್ 5 ರೊಳಗಾಗಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9916006910, 8618797704 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.