ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ನಿಂಗಣ್ಣ ಹುಳಗೋಳಕರ್ ಆಗ್ರಹ

ಶಹಾಬಾದ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರನ್ನು ಸಚಿವ ಸ್ಥಾನ ನೀಡಬೇಕಂದು ಮಾಜಿ ತಾಪಂ ಸದಸ್ಯ ನಿಂಗಣ್ಣ ಹುಳಗೋಳಕರ್ ಒತ್ತಾಯಿಸಿದ್ದಾರೆ.

ಈಗಾಗಲೇ ಶಾಸಕರಾಗಿ ಮೂರು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ.ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಬಡವರಿಗೆ ಆಹಾರ ಕಿಟ್‌ಗಳನ್ನು, ಮಾಸ್ಕ್ ಸ್ಯಾನಿಟೈಜರ್‌ಗಳನ್ನು ವಿತರಣೆ ಮಾಡಿದ್ದಾರೆ. ಅಪಘಾತದಲ್ಲಿ ತೊಂದರೆಗೊಳಗಾದ ಕುಟುಂಬಗಳಿಗೆ ವ್ಯಯಕ್ತಿಕ ಧನ ಸಹಾಯ ಮಾಡಿದ್ದಾರೆ.

ಮತಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ಅರಿತು ಸಾಕಷ್ಟು ಅಭಿವೃದ್ಧಿ ಪರವಾದ ಕೆಲಸಗಳನ್ನು ಮಾಡಿ ಜನಮನ್ನಣೆ ಪಡೆದಿದ್ದಾರೆ.ಸಾಕಷ್ಟು ಬಿಜೆಪಿ ಬೆಂಬಲಿಗರನ್ನು ಹುಟ್ಟು ಹಾಕಿ ಬಿಜೆಪಿ ಪಕ್ಷವನ್ನು ಬಲಿಷ್ಟಗೊಳಿಸಿ ಮತಕ್ಷೇತ್ರದಲ್ಲಿ ಬಿಜೆಪಿಯ ಬಾವುಟ ಹಾರುವಂತೆ ಮಾಡಿ ತೋರಿಸುತ್ತಿದ್ದಾರೆ.

ರಾಜಕೀಯವಾಗಿ ಎಲ್ಲಾ ಅನುಭವ ಪಡೆದಿರುವ ಶಾಸಕ ಮತ್ತಿಮಡು ಅವರನ್ನು ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳ್ಳುತ್ತದೆ.ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬಸವರಾಜ ಮತ್ತಮಡು ಅವರನ್ನು ಮಂತ್ರಿಸ್ಥಾನ ನೀಡಬೇಕೆಂದು ಹುಳಗೋಳಕರ್ ಆಗ್ರಹಿಸಿದ್ದಾರೆ.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

6 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

7 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

7 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

7 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

8 hours ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420