ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ – ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮದ https://adcl.karnataka.gov.in ವೆಬ್ಸೈಟ್ದಲ್ಲಿ ಅಪ್ಲೋಡ್ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಮೂರನೇ ಹಂತ, ಬಡೇಪುರ ಕಾಲೋನಿ, ಟೋಯಟೊ ಶೋರೂಂ ಎದುರಿಗೆ, ವಿಜಯಬ್ಯಾಂಕ್ ಮೇಲಗಡೆ, ಕಲಬುರಗಿ-585105 ಕಚೇರಿ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…