ಬಿಸಿ ಬಿಸಿ ಸುದ್ದಿ

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ-ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಫಲಾನುಭವಿಗಳು ಆನ್‍ಲೈನ್ ಮೂಲಕ ವೆಬ್‍ಸೈಟ್‍ದಲ್ಲಿ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮ https://adijambava.online ವೆಬ್‍ಸೈಟ್‍ದಲ್ಲಿ ಅಪ್‍ಲೋಡ್ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, 3ನೇ ಹಂತ, ಬಡೇಪುರ ಕಾಲೋನಿ, ಟೋಯಟೊ ಶೋರೂಂ ಎದುರಿಗೆ, ವಿಜಯ ಬ್ಯಾಂಕ್ ಮೇಲಗಡೆ, ಕಲಬುರಗಿ-585105 ವಿಳಾಸಕ್ಕೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

1 hour ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago