ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಸಲು ತಹಸೀಲ್ ಮುಂದೆ ಪ್ರತಿಭಟನೆ

ಸುರಪುರ: ರಾಜ್ಯದಲ್ಲಿರುವ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ತಹಸೀಲ್ ಕಚೇರಿ ಮುಂದೆ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಬಿಸಿಯೂಟ ತಯಾರಕರಿಗೆ ೨೦೨೧ರ ಜೂನ್ ಮತ್ತು ಜುಲೈ ತಿಂಗಳ ವೇತನ ಬಿಡುಗಡೆಗೊಳಿಸಬೇಕು.ಈಗಾಗಲೇ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶದಂತೆ ಕರ್ನಾಟಕದಲ್ಲಿಯೂ ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿಯಾಗಬೇಕು,ಅಸಂಘಟಿತ ಕಾರ್ಮಿಕರಿಗೆ ನೀಡಿದಂತೆ ಬಿಸಿಯೂಟ ತಯಾರಕರಿಗೂ ೫ ಸಾವಿರ ರೂಪಾಯಿಗಳ ಲಾಕ್‌ಡೌನ್ ಪರಿಹಾರ ನೀಡಬೇಕು.

೬೦ ವರ್ಷ ಮೇಲ್ಪಟ್ಟ ಬಿಸಿಯೂಟ ತಯಾರಕರಿಗೆ ಕೆಲಸದಿಂದ ತೆಗೆಯದೆ ಮುಂದುವರೆಸಬೇಕು,ಪ್ರತಿ ಶಾಲೆಯಲ್ಲಿ ಇಬ್ಬರು ಅಡುಗೆ ತಯಾರಕರು ಇರುವಂತೆ ನಿಯಮ ರೂಪಿಸಬೇಕು.ಬಿಸಿಯೂಟ ತಯಾರಕರ ಮೇಲ್ವಿಚಾರಣೆ ಎಸ್ಡಿಎಮ್‌ಸಿಗೆ ವಹಿಸದೆ ಶಿಕ್ಷಣ ಇಲಾಖೆಗೆ ವಹಿಸಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಇಡೇರಿಸಬೇಕೆಂದು ಆಗ್ರಹಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಸಿಯೂಟ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕಲ್ಪನಾ ಗುರಸುಣಗಿ,ಕಾರ್ಯದರ್ಶಿ ಶ್ರೀದೇವಿ ಕೂಡಲಗಿ,ಖಜಾಂಚಿ ಬಸಮ್ಮ ತಡಬಿಡಿ,ಎಐಟಿಯುಸಿ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಪತ್ತಾರ,ಖಜಾಂಚಿ ಶಿವಾನಂದ ಸ್ವಾಮಿ,ರೈತ ಹೋರಾಟಗಾರ ಹಣಮಂತ್ರಾಯ ಮಡಿವಾಳ ಮುಖಂಡರಾದ ಗೋಪಮ್ಮ,ಯಮುನಾ,ಶರಣಮ್ಮ,ಗಂಗಮ್ಮ,ಭೀಮಬಾಯಿ,ಲಕ್ಷ್ಮೀ,ಶೋಭಾ,ಗೀತಾ,ಯಲ್ಲಮ್ಮ ಸೇರಿದಂತೆ ನೂರಕ್ಕೂ ಹೆಚ್ಚು ಜನ ಬಿಸಿಯೂಟ ತಯಾರಕರು ಭಾಗವಹಿಸಿದ್ದರು.

emedialine

Recent Posts

ರಾಜ್ಯಮಟ್ಟದ ಗಮಕ‌ ಸಮ್ಮೇಳ‌ನ

ಕಲಬುರಗಿ: ಜೇವರ್ಗಿ ತಾಲೂಕು‌ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೈಸೂರಿನ ಪರಂಪರೆ ಸಂಸ್ಥಯ ಸಹಯೋಗದಲ್ಲಿ ಜೇವರ್ಗಿಯ ಟೌನ್ ಹಾಲ್ ಹಳೆ…

3 mins ago

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

11 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

11 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

11 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

11 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420