ಕಲಬುರಗಿ: ದಿವ್ಯಾಂಗರು ಸಹಾಯಕ ಸಾಧನಗಳಾದ ಅಟೋಮೆಟಿಕ್ ಗೇರ್ ಹೊಂದಿದ ಕಾರುಗಳನ್ನು ಯಾವುದೇ ಮಾರ್ಪಾಡು ಮಾಡದೇ ಸುಲಭವಾಗಿ ಚಾಲನೇ ಮಾಡಬಲ್ಲರು. ಇಂತಹ ವಿಶೇಷಚೇತನರಿಗೆ ಚಾಲನಾ ಅನುಜ್ಞಾಪತ್ರ ಮತ್ತು ನೋಂದಣಿ ಪತ್ರ ಹಾಗೂ ಹಲವಾರು ವಿನಾಯಿತಿ/ಸೌಕರ್ಯ/ಪರಿಹಾರಗಳನ್ನು ರಾಜ್ಯ ಸರ್ಕಾರಗಳು ವಿಸ್ತರಿಸುವಂತೆ ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಆದೇಶಿಸಿರುತ್ತದೆ ಎಂದು ಡಿಸೆಬಲ್ಡ ಹೆಲ್ಪಲೈನ್ ಪೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ.
ದಿವ್ಯಾಂಗರು ಖರೀದಿಸಿದ ವಾಹನಗಳ ನೋಂದಣಿ ಸಮಯದಲ್ಲಿ ಮಾಲೀಕತ್ವದ ವಿವರಗಳನ್ನು ಸೆರೆಹಿಡಿಯುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮೋಟಾರು ವಾಹನ ನಿಯಮಗಳು, 1989ರ ಫಾರ್ಮ್-20ರಲ್ಲಿ ತಿದ್ದುಪಡಿಗಾಗಿ ಅಧಿಸೂಚನೆಯನ್ನು ಕೂಡ ಹೊರಡಿಸಿದೆ.
ಇತ್ತಿಚೆಗೆ ಕರ್ನಾಟಕ ಸಾರಿಗೆ ಆಯುಕ್ತರು, ಬೆಂಗಳೂರು ಅವರು ರಾಜ್ಯದ ಎಲ್ಲಾ ಉಪ ಸಾರಿಗೆ ಆಯುಕ್ತರಿಗೆ, ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಮತ್ತು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿಯಮಾನುಸಾರ ಕ್ರಮ ವಹಿಸಿ ಆಯಾ ಕಛೇರಿಯ ಸೂಚನಾ ಫಲಕದಲ್ಲಿ ಪ್ರದರ್ಶಿಸುವಂತೆ ಆದೇಶಿಸಿರುತ್ತಾರೆ.
ಎಲ್ಲಾ ವಿಶೇಷಚೇತನರು ಸಹಾಯಕ ಸಾಧನಗಳಾದ ಅಟೋಮೇಟಿಕ್ ಕಾರುಗಳನ್ನು ಖರೀದಿಸುವಾಗ ಎಲ್ಲರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…