ಕಲಬುರಗಿ: ಕೋವಿಡ್ ದಿನಗಳಲ್ಲಿ ವೇತನವಿಲ್ಲದೆ ಪರಿತಪಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ನೌಕರರು ಇದೇ 16 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಆಮ್ ಆದ್ಮಿ ಬೆಂಬಲ ಸೂಚಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ಜಿಲ್ಲಾ ವಕ್ತಾರರಾದ ಸಂಜೀವಕುಮಾರ ಕರೀಕಲ್ ಸೇವಾಬಡ್ತಿ, ಸಂಬಳ ವ್ಯತ್ಯಾಸ, ಮಿನಿ ಅಂಗನವಾಡಿ ಕೇಂದ್ರಗಳ ನೌಕರರ ವೇತನ, ನಿವೃತ್ತಿ ಸೌಲಭ್ಯದಂತಹ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂಗನವಾಡಿ ನೌಕರರು ರಾಜ್ಯಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ವಿಧಾನಸೌಧದಿಂದಲೇ ಆರಂಭವಾಗುವ ಅಂಗನವಾಡಿಗಳ ಪೌಷ್ಟಿಕ ಆಹಾರ ಮತ್ತು ಕೋಳಿ ಮೊಟ್ಟೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಬೇಕು. ಕೊರೋನಾ ಸಂದರ್ಭದಲ್ಲಿ ಅಂಗನವಾಡಿ ನೌಕರರು ಯಾವುದೇ ಷರತ್ತುಗಳಿಲ್ಲದೆ ಕಾರ್ಯ ನಿರ್ವಹಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜೀವ ಕಳೆದುಕೊಂಡ ನೌಕರರಿಗೆ 5 ಲಕ್ಷ ರೂ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಳೆದ ಅನೇಕ ತಿಂಗಳಿಂದ ತಡೆ ಹಿಡಿಯಲಾಗಿರುವ ವಿಶೇಷ ಚೇತನರ, ವ್ರಧ್ದರ ಹಾಗೂ ವಿಧವೆಯರ ವೇತನವನ್ನು ಪುನರಾರಂಭ, , ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಹಾಗೂ ನೌಕರರಿಗೆ ಕಳೆದ 6 ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದಾಗಿ ಇವರ ಕುಟುಂಬಗಳು ಬೀದಿಗೆ ಬಿದ್ದಿವೆ. ಇದು ಖಂಡನೀಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸದಿದ್ದರೆ ಪಕ್ಷ ಹೋರಾಟಕ್ಕೆ ಇಳಿಯುತ್ತದೆಂದು ಎಚ್ಚರಿಕೆ ನೀಡಿದ್ದಾರೆ.