ಆಳಂದ: ಜಿಲ್ಲೆಯ ಹಿರಿಯ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಆಳಂದ ತಾಲೂಕಿನ ಖಜೂರಿ ಗ್ರಾಮದ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ಬಂಗರಗೆ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಆಳಂದ ಮತಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಇವರು ಜಿಲ್ಲೆಯಲ್ಲಿಯೇ ಅತ್ಯಂತ ಹಿರಿಯ ಬಿಜೆಪಿ ಶಾಸಕರಾಗಿದ್ದಾರೆ ಅಲ್ಲದೇ ಆಳಂದ ಮತಕ್ಷೇತ್ರದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಿಕೊಂಡು ಬಂದ ಕೀರ್ತಿ ಅವರಿಗೆ ಸಲ್ಲುತ್ತದೆ.
ತಾಲೂಕಿನಾದ್ಯಂತ ಜರುಗಿದ ಪ್ರತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಲ್ಲಿ ಶ್ರಮ ಹಾಕಿದ್ದಾರೆ ಹೀಗಾಗಿ ಭಾರತೀಯ ಜನತಾ ಪಕ್ಷದ ವರಿಷ್ಠರು ಶಾಸಕ ಸುಭಾಷ್ ಗುತ್ತೇದಾರ ಅವರಿಗೆ ಒಂದು ಬಾರಿ ಸಚಿವರನ್ನಾಗಿ ಮಾಡಬೇಕೆಂದು ಮನವಿ ಮಾಡಿದ್ದಾರೆ.