ಬಿಸಿ ಬಿಸಿ ಸುದ್ದಿ

ಕಲಬುರಗಿಗೆ ಬಿಜೆಪಿಯಿಂದ ಮಹಾ ಅನ್ಯಾಯ: ಶಾಸಕ ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂಪುಟದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಡಬಲ್ಇಂಜಿನ್ ಸರ್ಕಾರದಿಂದ ಜಿಲ್ಲೆಗೆ ಅನ್ಯಾಯ ನಿರಂತರವಾಗಿ ಮುಂದುವರೆದಿದೆ ಎಂದು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು ಬಿಜೆಪಿ ಸರ್ಕಾರ ಮತ್ತೊಮ್ಮೆ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದೆ ದೋಖಾ ಮಾಡಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅದರಲ್ಲೂ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸದೇ ಅನ್ಯಾಯವೆಸಗಿದ್ದರು. ಈಗ ಅವರ ಉತ್ತರಾಧಿಕಾರಿ ಬೊಮ್ಮಾಯಿ ಅವರು ಕೂಡಾ ಮತ್ತೊಮ್ಮೆ ಈ ಪ್ರದೇಶವನ್ನು ಕಡೆಗಣನೆ ಮಾಡುವ ಮೂಲಕ ಅನ್ಯಾಯದ ಪರಂಪರೆ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಂಟು ಸಚಿವರನ್ನು ಹೊಂದಿದ್ದ ಕಲಬುರಗಿ ಜಿಲ್ಲೆ ಈಗ ಒಬ್ಬರೇ ಒಬ್ಬ ಸಚಿವರನ್ನೂ ಹೊಂದದೆ ಅನಾಥವಾಗಿರುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯತನ ಮತ್ತು ಬಿಜೆಪಿ ಸಂಸದ ಶಾಸಕರ ಅಸಹಾಯಕತೆ ಕಾರಣವಾಗಿದೆ ಎಂದು ಟೀಕೆ ಮಾಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಹಿರಿಯ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ದಿ ಹೊಳೆ ಹರಿಸುವುದಾಗಿ ಹೇಳಿ ಜನರನ್ನು ಮರುಳು ಮಾಡಿ ಓಟು ಗಿಟ್ಟಿಸಿದ್ದ ಜಿಲ್ಲೆಯ ಮಹಾನ್ ನಾಯಕರು ಖರ್ಗೆ ಅವರು ಕೇಂದ್ರ ಸಚಿವರಾಗಿದ್ದಾಗ ಮಂಜೂರು ಮಾಡಿದ್ದ ಹಲವಾರು ಯೋಜನೆಗೆಳು ವಾಪಸ್ ಹೋದಾಗ ಧ್ವನಿ ಎತ್ತಲಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಕೆಕೆಆರ್ಡಿಬಿಗೆ ನಿಗದಿತ ವಾರ್ಷಿಕ ಅನುದಾನ ಬಿಡುಗಡೆ ಮಾಡದಿರುವಾಗ, ನೆರೆಯಿಂದ ಜನರು ತೊಂದರೆಯಲ್ಲಿದ್ದಾಗ ಅವರ ನೆರವಿಗೆ ಧಾವಿಸುವಲ್ಲಿ ವಿಫಲವಾದಾಗ, ಕೊರೋನಾ ಸಾಂಕ್ರಾಮಿಕದಿಂದ ಜಿಲ್ಲೆಯ ಜನರು ಬೆಡ್, ಆಕ್ಸಿಜನ್, ಲಸಿಕೆ, ಅಂಬುಲೆನ್ಸ್ ಕೊರತೆಯಿಂದ ನರಳುತ್ತಿರುವಾಗ ಬೆನ್ನೆಲುಬು ಇಲ್ಲದ ಬಿಜೆಪಿ ಸಂಸದ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಜನರಿಗೆ ವೈದ್ಯಕೀಯ ನೆರವು ಕೊಡಿಸಲಿಲ್ಲ ಎಂದು ಒತ್ತಾಯಿಸಿದ್ದಾರೆ.

ಈಗ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸ್ಥಾನ ನೀಡದಿರುವಾಗಲೂ ಬಾಯಿಬಿಡುತ್ತಿಲ್ಲ ಎಂದ ಮೇಲೆ ಜನರು ಅಂತಹ ಮಹಾನ್ ನಾಯಕರಿಂದ ಮತ್ತೇನನ್ನು ನಿರೀಕ್ಷೆ ಮಾಡಬಹುದು? ಎಂದು ಹರಿಹಾಯ್ದಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago