ಬಿಸಿ ಬಿಸಿ ಸುದ್ದಿ

ಕಲಬುರಗಿಗೆ ಸಚಿವ ಸ್ಥಾನ ಕೊಡದೆ ಕಡೆಗಣಿಸಿರುವುದು ಖಂಡನೀಯ: ಶಿವಾನಂದ ಆರ್ ಕಿಳ್ಳಿ ಆಕ್ರೋಶ

ಕಲಬುರಗಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂಪುಟದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಯಲ್ಲಿ ಅನ್ಯಾಯವಾಗಿದೆ.

ಪ್ರತಿ ಬಾರಿಯೂ ಬಿಜೆಪಿ ಸರ್ಕಾರದಿಂದ ಜಿಲ್ಲೆಗೆ ಅನ್ಯಾಯ ನಿರಂತರವಾಗಿ ಮುಂದುವರೆದಿದೆ ಎಂದು ಕಲಬುರ್ಗಿ ಗ್ರಾಮೀಣ ಯುವ ಕಾಂಗ್ರೆಸ್ ಸಂಯೋಜಕರಾದ ಶಿವಾನಂದ ಆರ್ ಕಿಳ್ಳಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಜಿಲ್ಲೆಯಲ್ಲಿ ಐದು ಶಾಸಕರಿದ್ದರು ಮತ್ತೊಮ್ಮೆ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದೆ ಅನ್ಯಾಯ ಮಾಡಿದೆ. ಈ ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕಲ್ಯಾಣ‌ ಕರ್ನಾಟಕ ಪ್ರದೇಶಕ್ಕೆ ಅದರಲ್ಲೂ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸದೇ ಅನ್ಯಾಯವೆಸಗಿದ್ದರು.

ಈಗ ಅವರ ಉತ್ತರಾಧಿಕಾರಿ ಬೊಮ್ಮಾಯಿ‌ ಅವರು ಕೂಡಾ ಮತ್ತೊಮ್ಮೆ ಈ ಪ್ರದೇಶವನ್ನು ಕಡೆಗಣನೆ ಮಾಡುವ ಮೂಲಕ ಅನ್ಯಾಯದ ಪರಂಪರೆ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಂಟು ಸಚಿವರನ್ನು ಹೊಂದಿದ್ದ ಕಲಬುರಗಿ ಜಿಲ್ಲೆ ಈಗ ಒಬ್ಬರೇ ಒಬ್ಬ ಸಚಿವರನ್ನೂ ಹೊಂದದೆ ಅನಾಥವಾಗಿರುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯತನ ಮತ್ತು ಬಿಜೆಪಿ ಸಂಸದ ಶಾಸಕರ ಅಸಹಾಯಕತೆ ಕಾರಣವಾಗಿದೆ.

ಖರ್ಗೆರವರು ಸಂಸದರಾಗಿದ್ದಾಗ ಕಲ್ಬುರ್ಗಿ ಜಿಲ್ಲೆಗೆ ಮೂರು ಸಚಿವ ಸ್ಥಾನ ಕೊಡಿಸಿದ್ರು.ಬಿಜೆಪಿ ಅಧಿಕಾರಕ್ಕೆ ಬಂದಾಂಗಿಂದ ಕಲ್ಬುರ್ಗಿ ಜಿಲ್ಲೆಯ ಒಬ್ಬರನ್ನು ಸಹ ಸಚಿವ ಸ್ಥಾನ ನೀಡಿ ಗೌರವಿಸಲಿಲ್ಲ.

ಕಳೆದ‌ ಲೋಕಸಭಾ ಚುನಾವಣೆ ವೇಳೆ ಹಿರಿಯ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ದಿ ಹೊಳೆ ಹರಿಸುವುದಾಗಿ ಹೇಳಿ ಜನರನ್ನು ಮರುಳು ಮಾಡಿ ಓಟು ಗಿಟ್ಟಿಸಿದ್ದ ಕಲಬುರಗಿ ಜಿಲ್ಲೆಯ ಮಹಾನ್ ನಾಯಕರು ಖರ್ಗೆ ಅವರು ಕೇಂದ್ರ ಸಚಿವರಾಗಿದ್ದಾಗ ಮಂಜೂರು ಮಾಡಿದ್ದ ಹಲವಾರು ಯೋಜನೆಗೆಳು ವಾಪಸ್ ಹೋದಾಗ ಧ್ವನಿ ಎತ್ತಲಿಲ್ಲ.

ಈಗ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸ್ಥಾನ ನೀಡದಿರುವಾಗಲೂ ಬಾಯಿಬಿಡುತ್ತಿಲ್ಲ ಎಂದ ಮೇಲೆ ಜನರು ಅಂತಹ ಮಹಾನ್ ನಾಯಕರಿಂದ ಮತ್ತಿನ್ನೇನು ನಿರೀಕ್ಷೆ ಮಾಡಬಹುದು ಎಂದು ಹರಿಹಾಯ್ದರು.

ಈಗಲಾದರೂ ಕಲಬುರ್ಗಿಯ ಪ್ರಜ್ಞಾವಂತ ಮತದಾರರು ಜಾಗೃತರಾಗಿ ಮುಂದಿನ ದಿನಗಳಲ್ಲಿ ಕಲಬುರ್ಗಿಯ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಅಧಿಕಾರಕ್ಕೆ ತರಬೇಕೆಂದು ಪ್ರಜ್ಞಾವಂತ ಮತದಾರರಿಗೆ ಮನವಿ ಮಾಡಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago