ಶಹಾಬಾದ:ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್ಟಿ)ಗೆ ಸೇರಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಕಲಬುರಗಿ ಜಿಲ್ಲಾ ಕುರುಬ ಸಮಾಜವದ ವತಿಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.
ಸಂವಿಧಾನಬದ್ಧವಾಗಿ ಕುರುಬರ ಎಸ್ಟಿ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಹಲವಾರು ರೀತಿಯಲ್ಲಿ ಮನವಿ ಮಾಡುತ್ತಿದ್ದರೂ ಸಹ ಸರ್ಕಾರ ಯಾವುದೇ ಸ್ಪಂದನೆ ಸಿಗದೇ ಇರುವುದು ಕುರುಬರ ಮನಸ್ಸಿಗೆ ನೋವನ್ನುಂಟು ಮಾಡುತ್ತಿದೆ. ದೇಶದ ಮೂಲನಿವಾಸಿಗಳಾಗಿ, ಅಲೆಮಾರಿಗಳಾಗಿ, ಪರಿಶಿಷ್ಟ ಪಂಗಡ ಮೋಸಲಾಯತಿ ಹೊಂದುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕುರುಬ ಸಮಾಜ ಬೀದರ ಮತ್ತು ಕೊಡಗು ಜಿಲ್ಲೆಗಳಲ್ಲಿ ಎಸ್.ಟಿ ಮೀಸಲಾತಿ ಹೊಂದಿದೆ.
ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಎಸ್ಟಿ ಮೀಸಲಾತಿಯನ್ನು ವಿಸ್ತರಿಸಬೇಕೆಂಬ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ.ಆದ್ದರಿಂದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್ಟಿ)ಗೆ ಸೇರಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಹಾಗೂ ಒತ್ತಡ ತರುವಂತೆ ಮಾಡಬೇಕೆಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಜೇವರ್ಗಿ ಶಾಸಕ ಡಾ.ಅಜಯಸಿಂಗ್, ಕಲಬುರಗಿ ಜಿಲ್ಲಾ ಗೊಂಡ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ, ಸಂಗೋಳ್ಳಿ ರಾಯಣ್ಣ ಯುವ ಘರ್ಜನೆ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ, ನಗರದ ಸಂಗೋಳಿ ರಾಯಣ್ಣ ಗೌರವಾಧ್ಯಕ್ಷ ಡಿ.ಸಿ.ಹೊಸಮನಿ ಇತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…