ಕ್ರೀಡಾಪಟುಗಳಿಗೆ ನಗದು ಪುರಸ್ಕಾರಕ್ಕಾಗಿ ಅರ್ಜಿ ಅಹ್ವಾನ

0
13

ಕಲಬುರಗಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ/ಪದಕ ವಿಜೇತರಾದವರಿಗೆ 50,000 ರೂ.ಗಳ ನಗದು ಪುರಸ್ಕಾರ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು.

Contact Your\'s Advertisement; 9902492681

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು 2021ರ ಆಗಸ್ಟ್ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಜಯ ಬಾಣದ ಇವರ ಮೊಬೈಲ್ ಸಂಖ್ಯೆ 9844029235 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here