ಕಲಬುರಗಿ: ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಬೆಂಗಳೂರಿನ ಆದಿತ್ಯಾ ಬಿರ್ಲಾ ಫ್ಯಾಷನ್ ಆಂಡ್ ರಿಟೇಲ್ ಲಿಮಿಟೆಡ್ ಮದುರಾ ಕ್ಲಾಥಿಂಗ್ ಯೂನಿಟ್ ಇವುಗಳ ಸಹಯೋಗದೊಂದಿಗೆ ಟೈಲರ್ ಮತ್ತು ಹೊಲಿಗೆ ಯಂತ್ರ ಆಪರೇಟರ್ ಹುದ್ದೆಗಾಗಿ ಶನಿವಾರ ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ಸಂಸ್ಥೆ (ಪುರುಷ), ಕೇಂದ್ರ ಬಸ್‍ನಿಲ್ದಾಣ ರಸ್ತೆ, ಬಸ್ ಡಿಪೋ ನಂ 1 ಎದುರುಗಡೆ ಕಲಬುರಗಿ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಟೈಲರ್ ಮತ್ತು ಹೊಲಿಗೆ ಯಂತ್ರ ಆಪರೇಟರ್ ಹುದ್ದೆಗೆ 5ನೇ ತರಗತಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಜಿಲ್ಲೆಯ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಯೋಮಿತಿ 18 ವರ್ಷ ಮೇಲ್ಟಟ್ಟವರಾಗಿರಬೇಕು. ಊಟ ಮತ್ತು ವಸತಿ ಸೌಲಭ್ಯವಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಅಭ್ಯರ್ಥಿಗಳನ್ನು ಮೇಲ್ಕಂಡ ದಿನದಂದು ಸಂದರ್ಶನ ಮೂಲಕ ಅಯ್ಕೆ ಮಾಡಲಾಗುತ್ತದೆ.
ಅರ್ಹ ಮಹಿಳಾ ಅಭ್ಯರ್ಥಿಗಳು https://tinyurl.com/Tailoring-Jobs-2021 ಲಿಂಕ್‍ಗೆ ಸಂಪರ್ಕಿಸಿ ಆನ್‍ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ಬೆಂಗಳೂರಿನ ಆದಿತ್ಯಾ ಬಿರ್ಲಾ ಫ್ಯಾಷನ್ ಆಂಡ್ ರಿಟೇಲ್ ಲಿಮಿಟೆಡ್, ಮದುರಾ ಕ್ಲಾತಿಂಗ್ ಯೂನಿಟ್‍ಗಳಲ್ಲಿ ಕಾರ್ಯನಿರ್ವಹಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಸಂಯೋಜಕರ ಮೊಬೈಲ್ ಸಂಖ್ಯೆ 8317384664ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…