ಕಲಬುರಗಿ: ಇಲ್ಲಿನ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ನಗರದ ಹೊರ ವಲಯದ ಶರಣಸಿರಸಗಿಯ ಬಸವಭೂಮಿಯಲ್ಲಿ ದಿ. 8-8-2021ರಂದು ಬೆಳಗ್ಗೆ 11 ಗಂಟೆಗೆ (ಭಾನುವಾರ) ವಿಚಾರ ಪಂಚಮಿ ಕಾರ್ಯಕ್ರಮದ ಅಡಿಯಲ್ಲಿ ‘ಯಾವುದು ನಂಬಿಕೆ? ಯಾವುದು ಮೂಢನಂಬಿಕೆ?’ವಿಷಯ ಕುರಿತು ವಿಶೇಷ ವಿಚಾರೋಪನ್ಯಾಸ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ್ ಸತ್ಯಂಪೇಟೆ ಹಾಗೂ ಉಪಾಧ್ಯಕ್ಷ ನೀಲಕಂಠ ಆವಂಟಿ ತಿಳಿಸಿದ್ದಾರೆ
ಪ್ರಗತಿಪರ ಚಿಂತಕ ಪ್ರೊ. ಆರ್.ಕೆ. ಹುಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಹಾಗಾಂವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ. ಶಾಂತಾ ಅಷ್ಟಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕ.ರಾ.ವೈ.ಸ.ಪರಿಷತ್ತಿನ ಜಿಲ್ಲಾ ಗೌರವಾಧ್ಯಕ್ಷ ರವೀಂದ್ರ ಶಾಬಾದಿ, ರಾಜ್ಯ ನಿರ್ದೇಶಕ ಶರಣಬಸವ ಕಲ್ಲಾ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಕಲಬುರಗಿ ಬಸವ ಕೇಂದ್ರದ ಕೋಶಾಧ್ಯಕ್ಷ ಸೋಮಣ್ಣ ನಡಕಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಸವರಾಜ ಚೆಟ್ನಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.