ಕಲಬುರಗಿ: ರ್ನಾಟಕ ಅನುಸೂಚಿತ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳ ಸಮಗ್ರ ಮೇಲ್ವಿಚಾರಣೆಗಾಗಿ ಕಲಬುರಗಿ ವಿಭಾಗ ಮಟ್ಟದಲ್ಲಿ ಈ ಕೆಳಕಂಡ ಸಿಬ್ಬಂದಿಗಳನ್ನು ಹೊರಸಂಪನ್ಮೂಲದಿಂದ (ಹೊರಗುತ್ತಿಗೆ ಆಧಾರದ ಮೇಲೆ) ಸೇವೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸಹಾಯಕ ಯೋಜನಾ ವ್ಯವಸ್ಥಾಪಕರ 01 ಹುದ್ದೆಗೆ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ/ಕೃಷಿ/ ತೋಟಗಾರಿಕೆ/ಶಿಕ್ಷಣ/ಲೋಕೋಪಯೋಗಿ/ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳ ಸಹಾಯಕ ನಿರ್ದೇಶಕರ ವೃಂದದ ಯೋಜನೆಗಳ ಅನುಷ್ಠಾನದಲ್ಲಿ 5 ವರ್ಷಗಳ ಅನುಭವ ಹೊಂದಿರಬೇಕು. ಸ್ನಾತಕೋತ್ತರ ಪದವಿ/ಬಿ.ಇ/ಎಂ.ಬಿ.ಎ ಪದವೀಧರ ವಿದ್ಯಾರ್ಹತೆ ಹೊಂದಿರಬೇಕು.
ದತ್ತಾಂಶ ಸಂಗ್ರಹಣ ಅಧಿಕಾರಿಗಳ 01 ಹುದ್ದೆಗೆ ಕಂಪ್ಯೂಟರ್ ಸೈನ್ಸ್, ವಾಣಿಜ್ಯ, ಸಂಖ್ಯಾಶಾಸ್ತ್ರ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವೀಧರರಾಗಿರಬೇಕು. ಮತ್ತು ಗಣಕಯಂತ್ರದ ಜ್ಞಾನವನ್ನು ಹೊಂದಿರಬೇಕು.
ಇದೇ ಆಗಸ್ಟ್ 9 ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2021ರ ಆಗಸ್ಟ್ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು, ಮೊಬೈಲ್ ಸಂಖ್ಯೆ 9449242142 ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278621ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…