ಕೊಳವೆ ಬಾವಿ ತೋಡಿಸಿ ಸಾರ್ವಜನಿಕರಿಗೆ ನೀರಿನ ಅನುಕೂಲ ಮಾಡಿಕೊಟ್ಟ ಉದ್ಯಮಿ

ಶಹಾಬಾದ : ನಗರದ ವಾರ್ಡ ನಂ.೮ರಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು ಉದ್ಯಮಿ ಮತ್ತು ದಾನಿಗಳಾದ ನರೇಂದ್ರ ವರ್ಮಾ ಅವರು ತಮ್ಮ ವ್ಯಯಕ್ತಿಕ ಹಣದಿಂದ ಕೊಳವೆ ಬಾವಿ ತೋಡಿಸಿ ಸಾರ್ವಜನಿಕರಿಗೆ ನೀರಿನ ಅನುಕೂಲವಾಗುವ ನಿಟ್ಟಿನಲ್ಲಿ ಅನುಕೂಲ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಸದಸ್ಯ ರವಿ ರಾಠೋಡ ಮಾತನಾಡಿ, ನರೇಂದ್ರ ವರ್ಮಾ ಅವರು ಸರಳ ವ್ಯಕ್ತಿತ್ವದವರು. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಉದಾರ ಗುಣ ಅವರಲ್ಲಿದೆ.ಎಲ್ಲಯೂ ಪ್ರಚಾರ ಗಿಟ್ಟಿಸುವ ಕೆಲಸಕ್ಕೆ ಇಲ್ಲಿಯವರೆಗೆ ಮಾಡಿಲ್ಲ.ಈಗಾಗಲೇ ಬಹುತೇಖ ಸಾಮಾಜಿಕ ಪರವಾದ ಕೆಲಸಗಳನ್ನು ಸದ್ದಿಲ್ಲದೇ ಮಾಡಿದ್ದಾರೆ.ಸಾವಿರಾರು ಜನರಿಗೆ ಕೊರೊನಾ ಸಂದರ್ಭದಲ್ಲಿ ಆಹಾರ ಕಿಟ್‌ಗಳನ್ನು ಮನೆ ಕಳಿಸಿದ್ದಾರೆ.ಒಂದು ಕೈಯಿಂದ ಮಾಡಿದ ಸೇವೆ ಇನ್ನೊಂದು ಕೈಯಿಗೆ ಗೊತ್ತಾಗಬಾರದು ಎಂಬ ಪ್ರವೃತ್ತಿ ಉಳ್ಳವರು.

ಇಂದು ವಾರ್ಡ ನಂ. ೮ ರ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯನ್ನು ಮನಗಂಡು ಉಚಿತವಾಗಿ ಕೊಳವೆ ಬಾವಿಯನ್ನು ತೋಡಿಸಿ ನೀರಿನ ಅನುಕೂಲ ಮಾಡಿಕೊಟ್ಟಿದ್ದಾರೆ.ಅಲ್ಲದೇ ಜನಪ್ರತಿನಿಧಿಗಳು, ಮುಖಂಡರು ಮಾಡುವ ಕೆಲಸ ಇವರು ಮಾಡುತ್ತಿರುವುದು, ಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹ ವಿಷಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉದ್ಯಮಿ ನರೇಂದ್ರ ವರ್ಮಾ,ನಗರಸಭೆಯ ಸದಸ್ಯರಾದ ದತ್ತಾ ಫಂಡ್,ಜಗದೇವ ಸುಬೇದಾರ, ಶೋಯೇಬ ಶೇಖ, ರಾಕೇಶ ಕಕಡೆ ಸೇರಿದಂತೆ ಇತರರು ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

4 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420