ಸುರಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ಆರಂಭಿಸಲಾಗಿದೆ.ಶುಕ್ರವಾರ ನಡೆದ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪತ್ರಕರ್ತ ಮುರಳಿಧರ ಅಂಬುರೆ ಮಾತನಾಡಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸಂಸ್ಥೆಯು ಸಮಾಜದ ವಿವಿಧ ರಂಗಗಳ ಏಳಿಗೆಗೆ ತನ್ನದೆ ಆದ ಕೊಡುಗೆಯನ್ನು ನೀಡುತ್ತಿದ್ದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.
ನಂತರ ಸಂಸ್ಥೆಯ ಯೋಜನಾಧಿಕಾರಿ ಸಂತೋಷ ಎ.ಎಸ್ ಮಾತನಾಡಿ,ಇಂದು ಅನೇಕ ಜನರಿಗೆ ಸರಕಾರದ ಯೋಜನೆಗಳ ಬಗ್ಗೆ ಗಮನಕ್ಕೆ ಇರುವುದಿಲ್ಲ ಇದರಿಂದ ಗ್ರಾಮೀಣ ಪ್ರದೇಶದ ಜನರು ಸರಕಾರದ ಯೋಜನೆಯ ಲಾಭ ಪಡೆಯದೆ ವಂತಿತರಾಗುತ್ತಾರೆ.ಆದ್ದರಿಂದ ಗ್ರಾಮೀಣ ಪ್ರದೇಶದ ಎಲ್ಲಾ ಜನರಿಗೂ ಸರಕಾರಗಳ ಯೋಜನೆಯನ್ನು ತಲುಪಿಸುವ ಕಾರ್ಯವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವತಿಯಿಂದ ಮಾಡಬೇಕೆಂಬ ಮಹಾದಾಸೆಯನ್ನು ನಮ್ಮ ಪೂಜ್ಯರಾದ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆರಂಭಿಸಲಾಗುತ್ತಿದ್ದು,ತಾಲೂಕಿನ ಪ್ರತಿ ಸ್ವಸಹಾಯ ಗುಂಪು ಆಯಾ ಗ್ರಾಮಗಳ ಜನರಿಗೆ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಿದೆ ಎಂದರು.
ಈ ಸಂದರ್ಭದಲ್ಲಿ ಕಚೇರಿ ಆಡಳಿತ ಪ್ರಬಂಧಕರಾದ ಶಿವಕುಮಾರ,ರಾಜೆಸಾಬ್,ರಮೇಶ ಕದಮ್,ಶಿವಕುಮಾರ ಅಂಬುರೆ,ಹನುಮಂತ ಟೊಣಪೆ ಹಾಗು ಕಚೇರಿ ಮೇಲ್ವಿಚಾರಕರು ಮತ್ತು ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸಿಎಸ್‌ಸಿ ಕೇಂದ್ರದ ಸೇವೆಯ ಕುರಿತಾದ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…