ವಿವಿಗೆ ಭೂಮಿ ನೀಡಿದ ರೈತರಿಗೆ ನ್ಯಾಯಕ್ಕಾಗಿ ರಚನಾತ್ಮಕ ಕಾರ್ಯ: ಸತ್ಯನಾರಾಯಣ

0
60

ಕಲಬುರಗಿ : ಕಲ್ಯಾಣ ಕರ್ನಾಟಕ ರೈತ ಹಿತರಕ್ಷಣಾ ಹೋರಾಟ ಸಮಿತಿಯ ವತಿಯಿಂದ ಇಂದು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಸತ್ಯನಾರಾಯಣರವರನ್ನು ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಅವರನ್ನು ಅಭಿನಂದಿಸಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಿದ ರೈತರಿಗೆ ನ್ಯಾಯ ಒದಗಿಸಲು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಬಗ್ಗೆ ಸಮಾಲೋಚನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿಗಳು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ತಮ್ಮ ಭೂಮಿ ನೀಡಿ ದೊಡ್ಡ ತ್ಯಾಗ ಮಾಡಿದ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸುವದಾಗಿ ಭರವಸೆ ನೀಡಿದರು. ಭರವಸೆ ನೀಡಿದ ಅವರು ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ಮಹತ್ತರವಾದ ಉದ್ದೇಶವಿಟ್ಟುಕೊಂಡು  ಸ್ಥಾಪನೆಯಾದ ಈ ವಿಶ್ವವಿದ್ಯಾಲಯದ ವತಿಯಿಂದ, ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಸೇರಿದಂತೆ ಆಯಾ ಪ್ರಮುಖ ಕೇಂದ್ರಗಳ ಸ್ಥಾಪನೆಯ ಬಗ್ಗೆ ತಾವು ವಿಶೆಷ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.

Contact Your\'s Advertisement; 9902492681

ಇದಕ್ಕೆ ಸಂಬಂಧಿಸಿದಂತೆ ರೈತ ಹಿತರಕ್ಷಣಾ ಸಮಿತಿ ಸಲ್ಲಿಸುವ ಪ್ರಸ್ತಾವನೆಗೆ ತಾವು ತಕ್ಷಣ ಸ್ಪಂದಿಸಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿಮಂತ್ರಾಲಯದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಅತಿ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.

ತಾವು ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿಶ್ವವಿದ್ಯಾಲಯದ ವತಿಯಿಂದ ಕೈಗೊಳ್ಳಬೇಕಾದ ವಿಶೆಷ ಯೋಜನೆಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸುವುದರ ಬಗ್ಗೆ ಸಮಾಲೋಚನೆ ಸಭೆಯಲ್ಲಿ ಮುಕ್ತವಾಗಿ ತಮ್ಮ ವಿಚಾರವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರುಗಳಾದ, ಲಿಂಗರಾಜ ಸಿರಗಾಪೂರ, ಡಾ. ಭದ್ರಶೆಟ್ಟಿ, ಯಶವಂತರಾಯ ಪಾಟೀಲ, ಚಂದ್ರಕಾಂತ ಭೂಸನೂರ, ಅಶೋಕ ವಗ್ಗೆ, ಭೀಮಾಶಂಕರ ಪಟ್ಟಣ, ಜಗನ್ನಾಥ ಹೊಸ ಕುರುಬ, ಶರಣಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here