ಕಲಬುರಗಿ : ಕಲ್ಯಾಣ ಕರ್ನಾಟಕ ರೈತ ಹಿತರಕ್ಷಣಾ ಹೋರಾಟ ಸಮಿತಿಯ ವತಿಯಿಂದ ಇಂದು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಸತ್ಯನಾರಾಯಣರವರನ್ನು ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರ ನೇತೃತ್ವದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಅವರನ್ನು ಅಭಿನಂದಿಸಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಿದ ರೈತರಿಗೆ ನ್ಯಾಯ ಒದಗಿಸಲು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಬಗ್ಗೆ ಸಮಾಲೋಚನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿಗಳು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ತಮ್ಮ ಭೂಮಿ ನೀಡಿ ದೊಡ್ಡ ತ್ಯಾಗ ಮಾಡಿದ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸುವದಾಗಿ ಭರವಸೆ ನೀಡಿದರು. ಭರವಸೆ ನೀಡಿದ ಅವರು ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ಮಹತ್ತರವಾದ ಉದ್ದೇಶವಿಟ್ಟುಕೊಂಡು ಸ್ಥಾಪನೆಯಾದ ಈ ವಿಶ್ವವಿದ್ಯಾಲಯದ ವತಿಯಿಂದ, ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಸೇರಿದಂತೆ ಆಯಾ ಪ್ರಮುಖ ಕೇಂದ್ರಗಳ ಸ್ಥಾಪನೆಯ ಬಗ್ಗೆ ತಾವು ವಿಶೆಷ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.
ಇದಕ್ಕೆ ಸಂಬಂಧಿಸಿದಂತೆ ರೈತ ಹಿತರಕ್ಷಣಾ ಸಮಿತಿ ಸಲ್ಲಿಸುವ ಪ್ರಸ್ತಾವನೆಗೆ ತಾವು ತಕ್ಷಣ ಸ್ಪಂದಿಸಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿಮಂತ್ರಾಲಯದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಅತಿ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.
ತಾವು ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿಶ್ವವಿದ್ಯಾಲಯದ ವತಿಯಿಂದ ಕೈಗೊಳ್ಳಬೇಕಾದ ವಿಶೆಷ ಯೋಜನೆಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸುವುದರ ಬಗ್ಗೆ ಸಮಾಲೋಚನೆ ಸಭೆಯಲ್ಲಿ ಮುಕ್ತವಾಗಿ ತಮ್ಮ ವಿಚಾರವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ, ಲಿಂಗರಾಜ ಸಿರಗಾಪೂರ, ಡಾ. ಭದ್ರಶೆಟ್ಟಿ, ಯಶವಂತರಾಯ ಪಾಟೀಲ, ಚಂದ್ರಕಾಂತ ಭೂಸನೂರ, ಅಶೋಕ ವಗ್ಗೆ, ಭೀಮಾಶಂಕರ ಪಟ್ಟಣ, ಜಗನ್ನಾಥ ಹೊಸ ಕುರುಬ, ಶರಣಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…