ಡಾ.ಛಪ್ಪರಬಂದಿ ಹಾಗೂ ಕರೊನಾ ಸೇನಾನಿಗಳಿಗೆ ಸ್ನೇಹ ಸಮ್ಮಾನ ನಾಳೆ

0
37

ಕಲಬುರಗಿ: ಬೆಂಗಳೂರಿನ ವಿಶ್ವ ಮಾನವ ಹಕ್ಕುಗಳ ಸಂರಕ್ಷಣೆ ಆಯೋಗದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಹಿನ್ನೆಲೆಯಲ್ಲಿ ಸಾಹಿತ್ಯ ಪ್ರೇರಕ ಡಾ.ಶರಣರಾಜ್ ಛಪ್ಪರಬಂದಿ ಅವರಿಗೆ ಕ್ರಿಯಾಶೀಲ ಗೆಳೆಯರ ಬಳಗದ ವತಿಯಿಂದ ‘ಸ್ನೇಹ ಸಮ್ಮಾನ’ ಹಾಗೂ ಮಹಾಮಾರಿ ಕರೊನಾ ಸೋಂಕಿನ ವಿರುದ್ಧ ಹೋರಾಟ ಮಾಡಿದ ಆಪಧ್ಬಾಂದವರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮವನ್ನು ನಾಳೆ (ಸೋಮವಾರ) ಬೆಳಗ್ಗೆ ೧೦.೩೦ಕ್ಕೆ ನಗರದ ಕಲಾ ಮಂಡಳದಲ್ಲಿ ಏರ್ಪಡಿಸಲಾಗಿದೆ ಎಂದು ಬಳಗದ ಸಂಚಾಲಕ ಪ್ರಭುಲಿಂಗ ಮೂಲಗೆ ತಿಳಿಸಿದ್ದಾರೆ.

ತನ್ನ ಕುಟುಂಬದ ಹಿತಾಸಕ್ತಿಗಿಂತ ಸಮಾಜದ ಹಿತವೇ ಮುಖ್ಯವೆಂದು ಬದುಕು ಸಾಗಿಸುತ್ತಿರುವ ಪರೋಪಕಾರಿ ಡಾ.ಶರಣರಾಜ್ ಛಪ್ಪರಬಂದಿ ಅವರ ಸಾಮಾಜಿಕ ಕೊಡುಗೆ ಅಪಾರವಾಗಿದ್ದು, ಕಿಲ್ಲರ್ ಕರೊನಾದ ಹಿನ್ನೆಲೆ ಲಾಕ್ಡೌನ್ ಜಾರಿಗೊಳಿಸಿದ ಸಂದರ್ಭದಲ್ಲೂ ಅನೇಕ ಜನೋಪಯೋಗಿ ಕಾರ್ಯ ಮಾಡಿ ಜನರ ವಿಶೇಷ ಗಮನ ಸೆಳೆದಿದ್ದಾರೆ.

Contact Your\'s Advertisement; 9902492681

ತಮ್ಮ ಕುಟುಂಬದ ಕಾರ್ಯಗಳನ್ನು ಬದಿಗೊತ್ತಿ ಕಾರ್ಯ ನಿರ್ವಹಿಸುವ ಮೂಲಕ ಜನರ ಮತ್ತು ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ವಿವಿಧ ಕ್ಷೇತ್ರಗಳ ಕರೊನಾ ಸೇನಾನಿಗಳಿಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಶ್ರೀನಿವಾಸ ಸರಡಗಿಯ ಶ್ರೀ ರೇವಣಸಿದ್ಧ ಶಿವಾಚಾರ್ಯರವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಕಾರ್ಯಕ್ರಮ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನೀಯರ್ ಜಗನ್ನಾಥ ಹಲಿಂಗೆ ಉದ್ಘಾಟಿಸಲಿದ್ದಾರೆ.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಅಧ್ಯಕ್ಷತೆ ವಹಿಸಲಿದ್ದು, ಕಮಲಾಪುರ ತಹಾಸೀಲ್ದಾರ್ ಅಂಜುಮ್ ತಬಸ್ಸುಮ್, ಸಂಶೋಧಕ ಮುಡುಬಿ ಗುಂಡೇರಾವ, ಉದ್ಯಮಿ ಗಗನ ಗಿಲ್ಡಾ ಬಳಗದ ವಿಜಯಕುಮಾರ ತೇಗಲತಿಪ್ಪಿ, ಡಾ.ಬಾಬುರಾವ ಶೇರಿಕಾರ, ರವೀಂದ್ರಕುಮಾರ ಭಂಟನಳ್ಳಿ, ಶರಣಬಸಪ್ಪ ನರೂಣಿ, ಹಣಮಂತರಾಯ ಅಟ್ಟೂರ, ಪ್ರಭವ ಪಟ್ಟಣಕರ್ ಸೇರಿದಂತೆ ಇತರರು ಭಾಗವಹಿಸುವರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here