ಕಲಬುರಗಿ: ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಧಗಧಗ ಉರಿದಿರುವ ಘಟನೆ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ರಟಕಲ್ ಗ್ರಾಮದ ನಿವಾಸಿ ಸಂಗಣ್ಣಾ ಬಳವಡಗಿ ಅವರಿಗೆ ಸೇರಿದ ಹೋಟೆಲ್ ಆಗಿದ್ದು, ನಿನ್ನೆ ಗ್ಯಾಸ್ ಸಿಲಿಂಡರ್ ಬಳಸಿ ಅನ್ನ ತಯಾರಿಸುತ್ತಿದ್ದ ವೇಳೆ ಈ ಅವಘಟ ಸಂಭವಿಸಿದೆ ಎನ್ನಲಾಗಿದೆ. ಭಾರಿ ಅನಾಹುತ ತಪ್ಪಿದೆ.
ಘಟನೆಯಲ್ಲಿ ಯಾವುದೇ ಜೀವ ಹಾನಿ ಉಂಟಾಗಿಲ್ಲ. ನಗದು ಸೇರಿದಂತೆ ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಬೆಂಕಿಗೆ ಆಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.
ಸಂಗಣ್ಣಾ ಆರ್ಥಿಕವಾಗಿ ಹಿಂದುಳಿದಿದ್ದು, ಹೋಟೆಲ್ ನಲ್ಲಿ ಸಣ್ಣ ಪುಟ ವ್ಯವಹಾರ ನಡೆಸಿ ಬದುಕು ನಡೆಸುತ್ತಿದ್ದ, ಘಟನೆಯಿಂದ ಕುಟುಂಬ ಬೀದಿಗೆ ಬಂದಿದೆ. ಸರಕಾರ ಜಿಲ್ಲಾಡಳಿತ ನೆರವಿಗೆ ಧಾವಿಸಬೇಕೆಂದು ಸಿಪಿಐಎಂ ಮುಖಂಡ ಶರಣಬಸಪ್ಪ ಮಮಶೇಟ್ಟಿ ಆಗ್ರಹಿಸಿದ್ದಾರೆ.
ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…