ಬೆಂಗಳ್ರರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪನವರು ನೀರವರಿ ಯೋಜನೆಗಳಿಗೆ ನೀಡಿದ ಕೊಡುಗೆ ಅಪಾರ. ಇವರು ನೀಡಿದ ಆಡಳಿತ ಎಲ್ಲಾ ಜನಪ್ರತಿನಿಧಿಗಳಿಗೆ ಪ್ರೇರಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಿ.ಎಸ್.ನಿಜಲಿಂಗಪ್ಪನವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಅವರು ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್. ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್ ಹಾಗೂ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.