ಆಳಂದ: ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆ ತಂದಾಗ, ಕಾಂಗ್ರೆಸ್ ಸಂಸದರು ಸದನದಿಂದ ಹೊರನಡೆದಿರುವುದು ದೇಶದ ಸುರಕ್ಷತೆ ವಿಚಾರದಲ್ಲಿ ಆ ಪಕ್ಷಕ್ಕಿರುವ ನಿಷ್ಕಾಳಜಿಯೇ ಸಾಕ್ಷಿ. ಕಾಂಗ್ರೆಸ್ ಮುಖವಾಡ ಈ ಮೂಲಕ ಮತ್ತೊಮ್ಮೆ ಕಳಚಿ ಬಿದ್ದಿದೆ ಎಂದು ನಿಂಬರ್ಗಾ ಬಿಜೆಪಿ ಮುಖಂಡ ಬಸವರಾಜ ಯಳಸಂಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಕೆಂದ್ರದಲ್ಲಿ ಆಡಳಿತದಲ್ಲಿದ್ದಾಗ ಹಿಂದೂಗಳ ವಿರುದ್ಧ ಮಸೂದೆ ತರುತ್ತಿತ್ತು. ಆದರೆ, ಈಗ ದೇಶ ವಿರೋಧಿಗಳನ್ನು ಪತ್ತೆ ಹಚ್ಚಲು ಪೂರಕ ಮಸೂದೆ ತಂದಾಗ ಅದನ್ನು ಬೆಂಬಲಿಸದೆ ಸದನದ ಕಲಾಪ ಬಹಿಷ್ಕರಿಸುವುದು ಕಾಂಗ್ರೆಸ್ ಭಯೋತ್ಪಾದಕರ ಪರ ನೀತಿ ತೋರಿಸುವಂತಿದೆ ಎಂದು ಹೇಳಿದರು.
ಭಯೋತ್ಪಾದಕರಿಗೆ ಹಣ ನೀಡುವವರನ್ನು ಮತ್ತು ಜಿಹಾದಿ ಸಾಹಿತ್ಯ ಒದಗಿಸಿ ಕೊಡುವವರನ್ನು ಭಯೋತ್ಪಾದಕರೆಂದು ಪರಿಗಣಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ಕೆಂದ್ರ ಸರ್ಕಾರ ಅಂಗೀಕರಿಸಿದೆ. ಇದಕ್ಕಾಗಿ ಪ್ರಧಾನಿ ನರೆಂದ್ರ ಮೋದಿ ಮತ್ತು ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದ್ದಾರೆ.