ಪುತ್ತೂರ್: ಕಾಲೇಜು ವಿದ್ಯಾರ್ಥಿಗಳಿಂದ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳೆಲ್ಲರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಗುರುನಂದನ್, ಪ್ರಜ್ವಲ್, ಕಿಶನ್, ಸುನೀಲ್ ಹಾಗೂ ಪ್ರಖ್ಯಾತ್ ಎಂದು ಗುರುತಿಸಲಾಗಿದ್ದು, ಬಂಧಿತರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಪ್ರಕರಣ ಕುರಿತು ಬುಧವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಕಾಲೇಜು ಬಿಟ್ಟ ಬಳಿಕ ಆರೋಪಿ ವಿದ್ಯಾರ್ಥಿಗಳು ಸಂಚು ರೂಪಿಸಿದ್ದಾರೆ. ವಿದ್ಯಾರ್ಥಿನಿಯನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಪರಿಚಯದ ವಿದ್ಯಾರ್ಥಿಗಳು ಆಗಿದ್ದರಿಂದ ಏನನ್ನು ಪ್ರಶ್ನಿಸದೇ ಸಂತ್ರಸ್ತೆ ವಿದ್ಯಾರ್ಥಿನಿ ಅವರೊಂದಿಗೆ ಹೋಗಿದ್ದಾಳೆ. ಬಳಿಕ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯು ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.
ವಿಡಿಯೋ ವೈರಲ್ ಹಿಂದಿದೆ ದ್ವೇಷ: ನಾಲ್ಕು ತಿಂಗಳ ಹಿಂದೆಯೇ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬರಲು ವೈರಲ್ ಆದ ವಿಡಿಯೋ ಕಾರಣವಾಗಿದೆ. ನಾಲ್ವರು ಆರೋಪಿ ವಿದ್ಯಾರ್ಥಿಗಳ ನಡುವೆ ಕಾಲೇಜಿನ ಚುನಾವಣೆ ವಿಚಾರದಲ್ಲಿ ಮನಸ್ತಾಪ ಉಂಟಾದ ಕಾರಣದಿಂದಾಗಿ, ದ್ವೇಷದಿಂದ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಅನಾಮಧೇಯ ವ್ಯಕ್ತಿಯ ಹೆಸರಿನಲ್ಲಿ ವಿಡಿಯೋ ಹರಿಬಿಟ್ಟು ಪ್ರಕರಣವನ್ನು ಆರೋಪಿ ವಿದ್ಯಾರ್ಥಿಗಳೇ ಬಿಚ್ಚಿಟ್ಟಿದ್ದಾರೆ.
ಘಟನೆ ಹಿನ್ನೆಲೆ ಏನು?: ಪುತ್ತೂರು ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೃತ್ಯವೆಸಗಿದ್ದರು. ಫೆಬ್ರವರಿಯಲ್ಲಿ ನಡೆದಿದ್ದ ಘಟನೆ ವಿಡಿಯೋ ವೈರಲ್ ಆದ ಬಳಿಕ ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…