ಲೋಕ್ ಅದಾಲತ್ ಜಾಗೃತಿ ಕಾರ್ಯಕ್ರಮ

0
34

ಕಲಬುರಗಿ: ನಗರದ ಹೇರಟೇಜ್ ಹೋಟೆಲ್‌ನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಕಲಬುರಗಿ ಜಿಲ್ಲೆ ಹಾಗೂ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಹಾಗೂ ಲೋಕ್ ಅದಾಲತ್ ಜಾಗೃತಿ ಕಾರ್ಯಕ್ರಮವನ್ನು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಸದಸ್ಯರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮೋಹನ್ ರಾವ್ ನಲವಡೆ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಮ್ ಚೌಗಲೆ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ.ಚಂದ್ರಕಾಂತ ಆರ್.ಕೆ.ಪಾಟೀಲ, ಡಾ.ಅಶೋಕ ಗುತ್ತೇದಾರ ಬಡದಾಳ, ಪೋಲಿಸ್ ವೆಲ್‌ಫೆರ್ ವಿಭಾಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರ್ ಎಸ್, ಶ್ರೀಕಾಂತ ರೆಡ್ಡಿ, ರಾಜು ಎಸ್ ಹಾಗೂ ಜಿಲ್ಲಾ ತಾಲೂಕ ಹೋಬಳಿ ಗ್ರಾಮ ಘಟಕದ ಪದಾಧಿಕಾರಿಗಳು ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here