ಬಿಸಿ ಬಿಸಿ ಸುದ್ದಿ

ಪ್ರಜಾಪ್ರಭುತ್ವದ ಉಳಿವಿಗಾಗಿ ಪಾಲಿಕೆ ಚುನಾವಣೆ ಶೀಘ್ರ ನಡೆಯಲಿ ಎಎಪಿ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಗೆ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಶೀಘ್ರವೇ ಚುನಾವಣೆಗೆ ದಿನಾಂಕ ನಿಗದಿ ಪಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಎಚ್‌.ಡಿ.ಬಸವರಾಜು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌.ಡಿ.ಬಸವರಾಜುರವರು, “ಕಲಬುರಗಿ ಜಿಲ್ಲೆಯಲ್ಲಿ ಉಪಚುನಾವಣೆ ನಡೆಸಲು ತೋರಿದ ಆಸಕ್ತಿಯನ್ನು ಪಾಲಿಕೆ ಚುನಾವಣೆಗೆ ತೋರದಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಜನಪ್ರತಿನಿಧಿಗಳು ಇಲ್ಲದಿರುವುದರಿಂದ ಅಧಿಕಾರಿಗಳು ದರ್ಬಾರ್‌ ನಡೆಸುತ್ತಿದ್ದು, ಜನರ ಆಶೋತ್ತರಗಳಿಗೆ ಬೆಲೆ ಇಲ್ಲವಾಗಿದೆ. ಇದರಿಂದ ನಗರದ ಅಭಿವೃದ್ಧಿ ಹಳ್ಳ ಹಿಡಿದಿದೆ. ಸಮರ್ಪಕ ಮೂಲಸೌಕರ್ಯಗಳು ಇಲ್ಲದೇ ಪರದಾಡುತ್ತಿರುವ ಗುಲ್ಬರ್ಗ ಜನರ ಗೋಳನ್ನು ಕೇಳುವವರು ಯಾರೂ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ದೊಡ್ಡದೊಡ್ಡ ರಾಜಕಾರಣಿಗಳ ವಂಶಪಾರಂಪರ್ಯ ರಾಜಕಾರಣ ಮಿತಿಮೀರಿರುವುದು ನವಾಬರ ಆಳ್ವಿಕೆಯನ್ನು ನೆನಪಿಸುತ್ತಿದೆ. ಜನಪರ ಕಾಳಜಿ ಹೊಂದಿರುವ ಯುವಕರು ರಾಜಕೀಯದಲ್ಲಿ ಮೇಲಕ್ಕೆ ಬರಲು ಈ ಕುಟುಂಬ ರಾಜಕಾರಣ ಅಡ್ಡಿಯಾಗಿದೆ. ಇಎಸ್‌ಐ ಆಸ್ಪತ್ರೆಯು ರಾಜಕಾರಣಿಯೊಬ್ಬರ ಸ್ಮಾರಕದಂತಿದ್ದು, ಉಪಯೋಗಕ್ಕೆ ಬರುವಂತಹ ಯಾವುದೇ ಆಧುನಿಕ ಸೌಲಭ್ಯಗಳಿಲ್ಲದೇ ಆಸ್ಪತ್ರೆಯೇ ರೋಗಿಯಂತಾಗಿದೆ. ಜಿಲ್ಲೆಯಲ್ಲಿ ಕೊರೊನಾ ಕೇಸುಗಳು ವಿಪರೀತವಾಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ತೋರಿದ ನಿರ್ಲಕ್ಷ್ಯ ಅತ್ಯಂತ ಖಂಡನೀಯ. ಜಿಲ್ಲೆಗೆ ಸಚಿವ ಸ್ಥಾನ ನೀಡದೆಯೇ ಈಗಲೂ ನಿರ್ಲಕ್ಷ್ಯ ತೋರಲಾಗಿದೆ ಎಂದು ಎಚ್‌.ಡಿ.ಬಸವರಾಜು ಹೇಳಿದರು.

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಗುಲ್ಬರ್ಗ ಜಿಲ್ಲೆಯು ತತ್ತರಿಸುತ್ತಿದೆ. ಮೂರು ವರ್ಷಗಳಿಂದ ಇಲ್ಲಿನ ಜನರಿಗೆ ಸೂಕ್ತ ನೆರೆ ಪರಿಹಾರ, ರೈತರಿಗೆ ಬೆಳೆ ಪರಿಹಾರ ಸಿಕ್ಕಿಲ್ಲ. ನೆರೆ ಹಾಗೂ ಬರದಿಂದ ಚಿಂಚೋಳಿ, ಆಳಂದ್‌, ಕಾಳಗಿ, ಚಿತ್ತಾಪುರ ಸುತ್ತಮುತ್ತಲಿನ ಜನರ ಬದುಕು ಕಷ್ಟದಲ್ಲಿದ್ದರೂ ಜನಪ್ರತಿನಿಧಿಗಳು ಅತ್ತ ತಲೆ ಹಾಕದಿರುವುದು ವಿಪರ್ಯಾಸ. ಜಿಲ್ಲೆಯ ಶಾಸಕರುಗಳು ಹಾಗೂ ಸಂಸದರು ತಮ್ಮನ್ನು ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆಯೇ ವಿನಃ ಕ್ಷೇತ್ರದ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಎಚ್‌.ಡಿ.ಬಸವರಾಜು ಆರೋಪ ಮಾಡಿದರು.

ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್‌ ವಿ. ಸದಂರವರು ಮಾತನಾಡಿ, “ರಾಜ್ಯದಲ್ಲಿ ಜನಪರ ರಾಜಕೀಯದ ಹೊಸ ಶಕೆ ಆರಂಭವಾಗಬೇಕು. ಅದಕ್ಕೆ ಗುಲ್ಬರ್ಗ ಮಹಾನಗರ ಪಾಲಿಕೆ ಚುನಾವಣೆಯು ಮುನ್ನುಡಿಯಾಗಲಿ. ಎಎಪಿ ಆಡಳಿತದಿಂದಾಗಿ ದೆಹಲಿಯ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಅಲ್ಲಿನ ಜನರು ತಿಂಗಳಿಗೆ ಸರಾಸರಿ 10ರಿಂದ 15 ಸಾವಿರ ಉಳಿತಾಯ ಮಾಡಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗುಲ್ಬರ್ಗಕ್ಕೂ ಅಂತಹ ಆಡಳಿತದ ಅವಶ್ಯಕತೆಯಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಎಎಪಿಯನ್ನು ಬೆಂಬಲಿಸಿದರೆ ಅದು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುಲ್ಬರ್ಗ ಜಿಲ್ಲಾಧ್ಯಕ್ಷರಾದ ಜಗದೀಶ್‌ ಬಳ್ಳಾರಿ, ಜಿಲ್ಲಾ ಮಾಧ್ಯಮ ಸಂಚಾಲಕರಾದ ಸಂಜೀವ್‌ ಕರೇಕಲ್‌, ಎಎಪಿ ಮುಖಂಡರಾದ ವಿಜಯ್‌ ಶಾಸ್ತ್ರಿಮಠ್‌, ಸ್ಥಳೀಯ ಮುಖಂಡರಾದ ಶೇಖರ್‌ ಸಿಂಗ್‌, ಈರಣ್ಣ ಗೌಡ, ಉದಯ್‌ ಬಳ್ಳಾರಿ, ಕಿರಣ್‌ ರಾಥೋಡ್‌, ಇಮ್ರಾನ್ ಅಹ್ಮದ್ ಹಾಗೂ ಅಂಜನಾ ಯಾತನೂರ್ ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago